ಬೆಂಗಳೂರು: ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನ.1 ರಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಸಂಘಟಿಸಿರುವ ಹೋರಾಟದಲ್ಲಿ ರಾಜ್ಯದಿಂದ ದೊಡ್ಡ ಸಂಖ್ಯೆಯಲ್ಲಿ ಇಂಡಿ ಕೂಟದ ಸದಸ್ಯರು ಪಾಲ್ಗೊಳ್ಳುವರು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದರು.
ಇದರ ಮುಂದುವರಿದ ಭಾಗವಾಗಿ ನ. 5 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲೂ ಕೂಡ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ನವೆಂಬರ್ 1 ರ ದಿಲ್ಲಿ ಹೋರಾಟಕ್ಕೆ ಕಾಂಗ್ರೆಸ್ ಸಚಿವರು, ಶಾಸಕರು, ಸಂಸದರು, ಮುಖಂಡರು ಹಾಗೂ ಇಂಡಿ ಕೂಟದ ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದೇವೆ. ಇದನ್ನೊಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಹೋರಾಟ ನಡೆದಿದೆ.
ದಿಲ್ಲಿ ಹೋರಾಟದ ಬಳಿಕ ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ನ. 5 ರಂದು ಇಂಡಿಯಾಮೈತ್ರಿ ಕೂಟದ ಸದಸ್ಯ ಪಕ್ಷಗಳೊಂದಿಗೆ ಪ್ರತಿಭಟನೆ ನಡೆಯಲಿದೆ. ಇದನ್ನು ಬ್ಲಾಕ್ ಹಾಗೂ ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಎಐಸಿಸಿ ಸೂಚನೆ ಮೇರೆಗೆ ರಾಜ್ಯಾದ್ಯಂತ ಎರಡು ತಿಂಗಳ ಕಾಲ ಹೋರಾಟ ನಡೆಯುತ್ತಿದೆ. ‘ಮತ ಉಳಿಸಿ ದೇಶ ಉಳಿಸಿ’ ಟ್ಯಾಗ್ ಲೈನ್ ಅಡಿ ಕಾರ್ಯಕರ್ತರು ಸ್ಥಳೀಯವಾಗಿ ಗಾಂಧೀಜಿ ಅಥವಾ ಅಂಬೇಡ್ಕರ್ ಪ್ರತಿಮೆ ಸ್ಥಳದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸುವರು.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಅವಹೇಳನ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಆರ್ಎಸ್ಎಸ್ ಹಾಗೂ ಬಿಜೆಪಿ ಅವರು ಮಾತೃಭೂಮಿ ಎಂದು ಹೇಳದೆ ಪಿತೃಭೂಮಿ, ಪುಣ್ಯಭೂಮಿ ಎನ್ನುತ್ತಾರೆ. ಹೀಗನ್ನುವವರ ಪಿತೃಗಳು ಕೂಡ ಖಾಲಿ ಮಾಡಬೇಕಾದೀತೆಂದಿದ್ದಾರೆ, ವೈಯಕ್ತಿಕವಾಗಿ ಯಾರ ಬಗ್ಗೆಯೂ ಟೀಕಿಸಿಲ್ಲ ಎಂದರು.