ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರತ ವಾತಾವರಣ ನೀಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ವತಿಯಿಂದ ಶುಕ್ರವಾರ ನಿಗಮದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಬಸ್ಸುಗಳಿಗೆ ಚಾಲನೆ ನೀಡಿ ಮಾತನಾಡಿದರು.
ಶಿಣ, ವಿಾನ, ಕುಟುಂಬ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿ ಎಲ್ಲ ೇತ್ರಗಳಲ್ಲಿಯೂ ಮಹಿಳೆಯರು ಸಾಧನೆಗಳನ್ನು ಮಾಡುತ್ತಿದ್ದಾರೆ. ಅವರ ಕೊಡುಗೆಗಳನ್ನು ಸ್ಮರಿಸುವುದು ಮತ್ತು ಅವರ ಹಕ್ಕುಗಳು, ಸಮಾನತೆ ಹಾಗೂ ಗೌರವವನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ವಿಜ್ಞಾನಿ ಡಾ.ವಿ.ಶುಭ ಮಾತನಾಡಿ, ಮಹಿಳೆಯರು ಪ್ರಾಮಾಣಿಕ ಬದ್ಧತೆ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿದ್ದಲ್ಲಿ ಯಾವುದೇ ಕೆಲಸವನ್ನಾದರೂ ಮಾಡಬಹುದು. ನಾವು ಕಂಡುಹಿಡಿದ ದೃಷ್ಟಿ ಎನ್ನುವ ಸಾಧನವನ್ನು 3 ತಿಂಗಳ ನಿಗದಿ ಮಾಡಿದ ಅವಧಿಯಲ್ಲಿಯೇ ಪೂರ್ಣಗೊಳಿಸಿದ್ದು, 46 ವರ್ಷಗಳ ವಿಾನ ೇತ್ರದಲ್ಲಿ ದೇಶಕ್ಕೆ ಸಲ್ಲಿಸಿದ ಅಳಿಲು ಸೇವೆ ನನ್ನದು ಎಂದು ಭಾವಿಸಿದ್ದೇನೆ ಎಂದು ತಿಳಿಸಿದರು.
ಪಲ್ಲಕ್ಕಿ ಬಸ್ಸುಗಳನ್ನು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೆೃ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಕೆ.ಎಂ.ಗಾಯಿತ್ರಿ ಮುಂತಾದವರು ಉಪಸ್ಥಿತರಿದ್ದರು.
688.83 ಕೋಟಿ ಮಹಿಳೆಯರು ಪ್ರಯಾಣ
ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 1.04 ಲ ಸಿಬ್ಬಂದಿ ಇದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254&ತಾಂತ್ರಿಕ ಸಿಬ್ಬಂದಿ, 3535&ಆಡಳಿತ ಸಿಬ್ಬಂದಿಯಾಗಿರುತ್ತಾರೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದ್ದು, ಮಾ.12ಕ್ಕೆ 688.83 ಕೋಟಿ ಮಹಿಳೆಯರು ಪ್ರಯಾಣಿಸಿರುತ್ತಾರೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.