ramesh babu 
ಬೆಂಗಳೂರು

ಖರ್ಗೆ ಗುರಿಯಾಗಿಸಿ ವಾಗ್ದಾಳಿ

ಮಲ್ಲಿಕಾರ್ಜುನ್​ ಖರ್ಗೆ ಅವರ ವಿರುದ್ಧ ಬಿಜೆಪಿ ನಾಯಕರು ನಿರಂತರವಾಗಿ ವೈಯಕ್ತಿಕ ಟೀಕೆ, ಅವಹೇಳನಕಾರಿ ಹೇಳಿಕೆ, ನಿಡುವ ಜತೆಗೆ ಸಂಘಟಿತ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್​ ಮಾಜಿ ಸದಸ್ಯ ರಮೇಶ ಬಾಬು ದೂರಿದ್ದಾರೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಪದೇ ಪದೇ ಪ್ರತಿಭಟನೆ ಹಾಗೂ ವಾಗ್ದಾಳಿ ನಡೆಸುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ ಬಾಬು ಆಪಾದಿಸಿದ್ದಾರೆ.

ಪದೇ ಪದೆ ಅವರ ವಿರುದ್ಧ ಬಿಜೆಪಿ ನಾಯಕರು ವೈಯಕ್ತಿಕ ಟೀಕೆ, ಅವಹೇಳನಕಾರಿ ಹೇಳಿಕೆ, ಸಾರ್ವಜನಿಕವಾಗಿ ಅವರ ಪ್ರತಿಷ್ಠೆಗೆ ಧಕ್ಕೆ ತರುವ ಅಭಿಯಾನ. ಸಂಘಟಿತ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಸೈದ್ಧಾಂತಿಕ ವಿಷಯಗಳಲ್ಲಿ ಖರ್ಗೆ ಅವರನ್ನು ಎದುರಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಕಳೆದ 2014ರಿಂದ ಬಿಜೆಪಿ ನಾಯಕರು ಒಂದಲ್ಲ ಒಂದು ಕಾರಣಕ್ಕೆ ಅವರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2015ರಲ್ಲಿ ಬಿಜೆಪಿ ಸಂಸದ ವೀರೇಂದ್ರ ಸಿಂಗ್, 2016ರಲ್ಲಿ ಎಂ. ವೆಂಕಯ್ಯ ನಾಯ್ಡು, 2017ರಲ್ಲಿ ಬಿಜೆಪಿ ಸಚಿವರು, 2022ರಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ , 23 ರಲ್ಲಿ ರಾಜ್ಯದ ಮಾಜಿ ಸಚಿವ ಆರಗ ಜ್ಞಾನೇಂದ್ರ ಖರ್ಗೆ ಅವರನ್ನು ಅವಮಾನಿಸಿ ಮಾತನಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಅನಿವಾರ್ಯ. ಆದರೆ ವೈಯಕ್ತಿಕ ದ್ವೇಷವು ರಾಜಕೀಯ ಚರ್ಚೆಗೆ ಪರ್ಯಾಯ ಆಗಲು ಅವಕಾಶ ನೀಡಬಾರದು. ಪರಸ್ಪರ ಗೌರವ ಹಾಗೂ ಪ್ರಜಾಸತ್ತಾತ್ಮಕ ಹೊಣೆಗಾರಿಕೆ ಆಧರಿಸಿ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.