Bengaluru Thanisandra Garage Car Fire
- ಬೆಂಗಳೂರಿನ ಥಣಿಸಂದ್ರದಲ್ಲಿರುವ ಕಾರ್ ಗ್ಯಾರೇಜ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ
- 25ಕ್ಕೂ ಹೆಚ್ಚು ವಾಹನಗಳು ಸಂಪೂರ್ಣ ಭಸ್ಮ, ಸಾಕಷ್ಟು ನಷ್ಟ
- ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಿರಬಹುದು ಎಂದು ಶಂಕಿಸಕಲಾಗಿದೆ
ಬೆಂಗಳೂರು: ಇಲ್ಲಿನ ಥಣಿಸಂದ್ರದಲ್ಲಿ ಕಾರ್ ಗ್ಯಾರೇಜ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿದ್ದ ಹಲವಾರು ಹೈ-ಎಂಡ್ ವಾಹನಗಳು ಸೇರಿದಂತೆ 25ಕ್ಕೂ ಹೆಚ್ಚು ಕಾರುಗಳು(Bengaluru Thanisandra Garage Car Fire) ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಸೋಮವಾರ ಬೆಳಗಿನ ಜಾವ 5:30ರ ಸುಮಾರಿಗೆ ಗ್ಯಾರೇಜ್‌ನಲ್ಲಿ ಸಂಭವಿಸಿದ ಬೆಂಕಿ ಕಾಣಿಸಿಕೊಂಡಿದೆ. ಇದು ಕ್ಷಣಾರ್ಧದಲ್ಲಿ ಗ್ಯಾರೇಜ್ ವ್ಯಾಪಿಸಿದ್ದು ಹಲವಾರು ಐಷಾರಾಮಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳ ಸ್ಪಷ್ಟ ಪಡಿಸಿದೆ.
25ಕ್ಕೂ ಹೆಚ್ಚು ಕಾರು ಭಸ್ಮ
ಬೆಂಕಿ ಅವಘಡ ಸಂಭವಿಸಿದ ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಆಗಮಿಸಿದೆ. 5 ಅಗ್ನಿಶಾಮಕ ವಾಹನಗಳನ್ನು ಬಳಸಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತಂದರು.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ?
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ತನಿಖೆಯ ನಂತರವೇ ನಿಖರ ಮಾಹಿತಿ ತಿಳಿಯಲಾಗಿದೆ. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಿಟಕಿ ವಸ್ತುಗಳು ನಾಶ
ಗ್ಯಾರೇಜ್ನಿಂದ ಪಕ್ಕದ ಶೆಡ್ಗೂ ಬೆಂಕಿ ಹೊತ್ತಿಕೊಂಡಿದ್ದು, ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಆಟೋಗಳು ಬೆಂಕಿಗಾಹುತಿಯಾಗಿವೆ. ಇಲ್ಲಿಯೇ ಕಿಟಕಿ ಫ್ಯಾಕ್ಟರಿ ಇದ್ದು, ಅಲ್ಲಿಗೂ ಬೆಂಕಿ ತಗುಲಿದ ಪರಿಣಾ 2 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಹಾಗೂ 4 ಲಕ್ಷ ರೂಪಾಯಿ ಮೌಲ್ಯದ ಯಂತ್ರಕ್ಕೆ ಹಾನಿಯಾಗಿದೆ ಎನ್ನಲಾಗಿದೆ,(ಏಜೆನ್ಸೀಸ್).