ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲುಎಸ್ಎಸ್ಬಿ) ಯಲ್ಲಿ ನೇರ ನೇಮಕಾತಿ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅಧಿಸೂಚನೆಯನ್ವಯ ತಾತ್ಕಾಲಿಕ ಮುಖ್ಯ ಆಯ್ಕೆಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿದೆ.
2025ರ ನ.15ರಂದು ಹೊರಡಿಸಲಾಗಿದ್ದ ನೇರ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಈ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಪಟ್ಟಿಗಳನ್ನು ಪರಿಶೀಲಿಸಬಹುದಾಗಿದೆ. ತಾತ್ಕಾಲಿಕ ಮುಖ್ಯ ಆಯ್ಕೆಪಟ್ಟಿ, ತಾತ್ಕಾಲಿಕ ಹೆಚ್ಚುವರಿ ಆಯ್ಕೆಪಟ್ಟಿ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಇತರೆ ಮಾಹಿತಿಗಳನ್ನು ಬೆಂಗಳೂರು ಜಲಮಂಡಳಿಯ ಅಧಿಕೃತ ವೆಬ್ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದು.