ಆಯುಧ ಪೂಜೆ ಹಾಗೂ ವಿಜಯದಶಮಿ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಅವರ ಜತೆ ಪೂಜೆ ಸಲ್ಲಿಸಿದರು  
ಬೆಂಗಳೂರು

ವಿಧಾನಸೌಧದಲ್ಲಿ ಸಿಎಂ ಆಯುಧ ಪೂಜೆ

ಆಯುಧ ಪೂಜೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ, ಪುತ್ರಿ ಐಶ್ವರ್ಯ ಜತೆ ವಿಧಾನಸೌಧಕ್ಕೆ ಆಗಮಿಸಿ ಮೂರನೆ ಮಹಡಿಯ ತಮ್ಮ ಕೊಠಡಿಯಲ್ಲಿ ಪೂಜೆ ನೆರೆವೇರಿಸಿದರು.

ಬೆಂಗಳೂರು: ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಸೋಮವಾರ ಬೆಳಗ್ಗೆ ಆಯುಧಪೂಜೆಯ ಸಂಭ್ರಮ ಮನೆ ಮಾಡಿತ್ತು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆದಿಯಾಗಿ ಸಚಿವರು, ಸಚಿವಾಲಯದ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡು ದೀಪ - ಧೂಪ ಅರ್ಪಿಸಿದರು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಆಗಮಿಸಿ ಮೂರನೆ ಮಹಡಿಯ ತಮ್ಮ ಕೊಠಡಿಯಲ್ಲಿ ಪೂಜೆ ನೆರೆವೇರಿಸಿದರು. ಪತ್ನಿ ಉಷಾ, ಪುತ್ರಿ ಐಶ್ವರ್ಯ ಹಾಗೂ ಸಹೋದರ ಡಿ.ಕೆ.ಸುರೇಶ್ ಭಾಗಿಯಾಗಿದ್ದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೂಡ ತಮ್ಮ ಕೊಠಡಿಯಲ್ಲಿ ಆಯೋಜಿಸಿದ್ದ ಪೂಜೆಯಲ್ಲಿ ಪಾಲ್ಗೊಂಡರು. ಉಳಿದಂತೆ ಸಚಿವರಾದ ಎಚ್.ಸಿ ಬಾಲಕೃಷ್ಣ, ಶರಣಪ್ರಕಾಶ ಪಾಟೀಲ್, ಯು.ಟಿ.ಖಾದರ್, ಬೈರತಿ ಸುರೇಶ್ ಸೇರಿ ಹಲವರು ತಮ್ಮ ಕೊಠಡಿಗಳಲ್ಲಿ ಪೂಜೆ ನೇರವೇರಿಸಿದರು.

ವಿಧಾನಸೌಧ ಹಾಗೂ ವಿಕಾಸಸೌಧದ ಪಾರಂಪರಿಕ ಸ್ಥಳಕ್ಕೆ ಯಾವುದೇ ಧಕ್ಕೆ ಆಗದಂತೆ ಆಯುಧ ಪೂಜೆ ಆಚರಣೆಗೆ ಆಡಳಿತ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ನಿಯಮಾವಳಿಯಂತೆ ಪೂಜೆ ನೆರವೇರಿಸಿದರು.

ರಾಜಭವನದಲ್ಲಿ ಪೂಜೆ

ಆಯುಧ ಪೂಜೆ ಹಾಗೂ ವಿಜಯದಶಮಿಯ ಹಿನ್ನಲೆಯಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಸೋಮವಾರ ರಾಜಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ದುರ್ಗಾ ದೇವಿಯ ಕೃಪೆಯಿಂದ ನಾಡಿನಲ್ಲಿ ಶಾಂತಿ,ಸಮದ್ಧಿ ನೆಲೆಸಲಿ, ನಾಡು ಪ್ರಗತಿಯತ್ತ ಹೆಜ್ಜೆ ಹಾಕಲಿ. ಜನ ಕಲ್ಯಾಣವಾಗಲಿ ಎಂದು ಪ್ರಾರ್ಥಿಸಿದರು.ಅಧಿಕಾರಿ, ಸಿಬ್ಬಂದಿಗೆ ಶುಭಾಶಯ ಕೋರಿದರು.