ಬೆಂಗಳೂರು: ಕನಕದಾಸರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡುವ ‘ಕನಕಶ್ರೀ ಪ್ರಶಸ್ತಿ’ಗೆ ವಿಮರ್ಶಕ ಎಚ್. ದಂಡಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಲಕ ಒಳಗೊಂಡಿದೆ. ವಿಮರ್ಶಕ ಬಂಜಗೆರೆ ಜಯಪ್ರಕಾಶ್ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ.
ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಶೈಲಿಯ ಬರವಣಿಗೆಗೆ ಹೆಸರಾದ ಎಚ್.ದಂಡಪ್ಪ ಅವರು, ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದಾರೆ. ನ. 27ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.