ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಬೇರ್​ ಫೂಟ್ ಟೆಕ್ನಿಷಿಯನ್ಸ್​ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು. foler
ಬೆಂಗಳೂರು

ಕನಿಷ್ಠ 26 ಸಾವಿರ ವೇತನ ಪಾವತಿಗೆ ಒತ್ತಾಯ

ರಾಜ್ಯದ್ಯಾಂತ ವಿಬಿ-ಜಿ-ರಾಮ್​-ಜಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಯ ಕೆಲಸವನ್ನು ಕಾಯಂಗೊಳಿಸಿ ಕನಿಷ್ಠ 26 ಸಾವಿರ ರೂ. ಪಾವತಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬೇರ್​ ಫೂಟ್​ ಟೆಕ್ನಿಷಿಯನ್ಸ್​ ಕ್ಷೇಮಾಭಿವೃದ್ಧಿ ಸಂದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕಾಯಂಗೊಳಿಸಿ ಕನಿಷ್ಠ 26 ಸಾವಿರ ರೂ. ಪಾವತಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬೇರ್​ ಫೂಟ್​ ಟೆಕ್ನಿಷಿಯನ್ಸ್​ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನರೇಗಾ ಯೋಜನೆಯ ಹೆಸರು ಬದಲಾಯಿಸಿ ವಿಬಿ-ಜಿ-ರಾಮ್​-ಜಿ ಎಂದಿಟ್ಟು ಕಾರ್ಮಿಕರ ಹೊಟ್ಟೆ ಮೇಲೆ ಬರೆ ಎಳೆದಿದೆ. ಇದೀಗ ಸಿಬ್ಬಂದಿಯ ಬದುಕಿಗೂ ಕೊಳ್ಳಿ ಇಡುವ ಪ್ರಯತ್ನ ಮಾಡುತ್ತಿದೆ. 3 ತಿಂಗಳಿಂದ ಬಾಕಿ ಇರುವ ಸಿಬ್ಬಂದಿಯ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. 2,500 ಜಾಬ್​ ಕಾರ್ಡ್​ಗೆ ಒಬ್ಬರಂತೆ ಬಿಎಫ್​ಟಿ ನೇಮಕ ಮಾಡಿಕೊಂಡಿದ್ದು, ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

10 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸೇವೆಯನ್ನು ಕಾಯಂಗೊಳಿಸಬೇಕು. ಕಾರ್ಮಿಕ ಕಾಯ್ದೆಗೆ ಒಳಪಡಿಸಿ ಸಕಲ ಸೌಲಭ್ಯಗಳನ್ನು ಕಲ್ಪಿಸಬೇಕು. ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಅವರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಕಾಮಗಾರಿ ನಿರ್ವಹಣಾ ಸ್ಥಳಕ್ಕೆ ಕಿಮೀಗಟ್ಟಲೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳು ಮರುಕಳುಹಿಸದಂತೆ ಎಚ್ಚರಿಕೆ ವಹಿಸಬೇಕು. ಇವೆಲ್ಲ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಘದ ರಾಜ್ಯಾಧ್ಯಕ್ಷ ಕೆ.ಆರ್​. ಭೀಮಪ್ಪ, ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ, ಪದಾಧಿಕಾರಿಗಳಾದ ನಾಗೇಶ್​, ನಾರಾಯಣಸ್ವಾಮಿ ಇತರರಿದ್ದರು.