ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಬಿವಿಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.  
ಬೆಂಗಳೂರು

ಕೆಪಿಎಸ್ಸಿ ಹಗರಣ ಸಿಬಿಐಗೆ ಒಪ್ಪಿಸಲು ಪಟ್ಟು

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕೆಪಿಎಸ್​ಸಿ ನಡೆಸಿರುವ ಅಕ್ರಮಗಳ ತನಿಖೆಯನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ (ಎಬಿವಿಪಿ) ಕಾರ್ಯಕರ್ತರು ಸ್ವಾತಂತ್ರ$್ಯ ಉದ್ಯಾನವನದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ದಣ ವಿಭಾಗದ ರಾಜ್ಯ ಕಾರ್ಯದರ್ಶಿ ಗೋಪಿ ರಂಗಸ್ವಾಮಿ ಮಾತನಾಡಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಲ್ಲಿ ಹಗರಣ ನಡೆದಿದೆ. ಈ ಕುರಿತು ಆ.4ರೊಳಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದೆವು. ಆದರೆ ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.
ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿನ ಅಕ್ರಮ ಸಹ ಸದ್ದು ಮಾಡುತ್ತಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಒಪ್ಪಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಳೆದ ಐದು ವರ್ಷಗಳಲ್ಲಿ ಕೆಪಿಎಸ್ಸಿ ಮೂಲಕ ನಡೆದಿರುವ ಎಲ್ಲ ನೇಮಕಾತಿ ಪ್ರಕ್ರಿಯೆಗಳ ತನಿಖೆ ನಡೆಸಬೇಕು. ಇಂತಹ ಪ್ರಕರಣಗಳು ಮರುಕಳುಹಿಸದಂತೆ ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.
ಎಬಿವಿಪಿ ದಣ ವಿಭಾಗದ ಸಂಟನಾ ಕಾರ್ಯದರ್ಶಿ ಬಸವೇಶ್​ ಕೋರಿ, ಸಂಟನಾ ಕಾರ್ಯದರ್ಶಿ ಮಣಿಕಂಠ ಕಳಸ, ನಗರ ಸಂಟನಾ ಕಾರ್ಯದರ್ಶಿ ಹರ್ಷಿತ್​ ಕೋಹಿಲ, ಕಾರ್ಯದರ್ಶಿಗಳಾದ ಶಶಾಂಕ್​, ಅಭಿನಂದನ್​ ಮತ್ತಿತರರಿದ್ದರು.