- ದಕ್ಷಿಣ ಪಾಲಿಕೆಯಲ್ಲಿ ಸಾಮೂಹಿಕ ಆರೋಗ್ಯ ತಪಾಸಣೆ
- ಮಹಿಳಾ ಸಿಬ್ಬಂದಿಯಲ್ಲೇ ಹೆಚ್ಚು ಸಮಸ್ಯೆಗಳಿರುವುದು ದೃಢ
ಬೆಂಗಳೂರು: ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಪೈಕಿ ಹೆಚ್ಚಿನವರು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗೆ ಒಳಗಾಗಿರುವುದು ಪತ್ತೆಯಾಗಿದೆ.
ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದೆ. ಹಾಗಾಗಿ ಇವರುಗಳ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ನಡೆಸಲಾಗುತ್ತಿದೆ. ದಕ್ಷಿಣ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಇಡೀ ದಿನ ಪೌರ ಕಾರ್ಮಿಕರಿಗೆ ಸಾಮೂಹಿಕ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
1,934 ಮಂದಿಗೆ ತಪಾಸಣೆ:
ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಒಟ್ಟು 1,934 ಪೌರಕಾರ್ಮಿಕರನ್ನು ತಪಾಸಣೆಗೆ ಒಳಪಡಿಸಿದ್ದು, ಈ ಪೈಕಿ 605 ಪುರುಷರು ಹಾಗೂ 1,348 ಮಹಿಳೆಯರು ಸೇರಿದ್ದಾರೆ. ತಪಾಸಣೆಗೆ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳಲಾಯಿತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ತಪಾಸಣೆಯಲ್ಲಿ ಕಂಡ ಖಾಯಿಲೆವಾರು ವಿವರ: