ಹಾಲು ಹಾಗೂ ಬಸ್​ ಪ್ರಯಾಣ ದರ ಏರಿಕೆ ವಿರೋಧಿಸಿ ಜೆಡಿಎಸ್​ ಕಾರ್ಯಕರ್ತರು ಫ್ಈಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು. 
ಬೆಂಗಳೂರು

ಬೆಲೆ ಏರಿಕೆ ವಿರೋಧಿಸಿ ಬೀದಿಗಿಳಿದ ಜೆಡಿಎಸ್

ದಿನಬಳಕೆಯ ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುವ ಮೂಲಕ ಸರ್ಕಾರ ಜನಸಾಮಾನ್ಯರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್ಪಾ ಕಾರ್ಯಕರ್ತರು ಘೋಷಣೆ ಕೂಗಿದರು.

ಬೆಂಗಳೂರು: ಹಾಲು, ಬಸ್ ಪ್ರಯಾಣ ದರ ಏರಿಸಿದ ಸರ್ಕಾರದ ತೀರ್ಮಾನ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಪ್ರತಿಭಟಿಸಿದರು.

ದಿನಬಳಕೆಯ ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುವ ಮೂಲಕ ಸರ್ಕಾರ ಜನಸಾಮಾನ್ಯರ ಹಿತ ಕಡೆಗಣಿಸಿದೆ ಎಂದು ಆಪಾದಿಸಿ ಘೋಷಣೆ ಕೂಗಿದರು.

ನೇತೃತ್ವ ವಹಿಸಿದ್ದ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ವಾತನಾಡಿ, ಹಾಲು, ಮೊಸರು, ತುಪ್ಪ, ಬೆಣ್ಣೆ ಪನ್ನೀರ್ ಸೇರಿ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸಿ ಬಡ ಜನರಿಗೆ ಆರ್ಥಿಕ ಹೊರೆ ತಂದಿದೆ ಎಂದು ದೂರಿದರು.

ರಾಜ್ಯದ ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ಇದ್ದು ರೈತರು, ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರು, ಜಾನುವಾರುಳ ಮೇವಿಗೆ ಅಭಾವ ಎದುರಾಗಿದೆ. ಕೃಷಿ ಉತ್ಪಾದನೆ ಕುಸಿದಿದ್ದು ಅಕ್ಕಿ, ಸಕ್ಕರೆ, ಬೇಳೆಕಾಳು ದರ ಏರಿದೆ.

ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ. 23 ರಿಂದ 30 ರವರೆಗೆ ಹೆಚ್ಚಿಸಿ ಜನರ ಮೇಲೆ ಬರೆ ಎಳೆದಿದೆ. ಸಾರ್ವಜನಿಕ ಸಾರಿಗೆ ದುಬಾರಿಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಆಪಾದಿಸಿದರು. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ವಾಜಿ ಎಂಎಲ್‌ಸಿಗಳಾದ ಕೆ.ಎ.ತಿಪ್ಪೇಸ್ವಾಮಿ, ಈ. ಕೃಷ್ಣಪ್ಪ, ವಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರಿ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

ಪ್ರತಿಭಟನೆ ಬಳಿಕ ರಮೇಶ್ ಗೌಡ ನೇತೃತ್ವದಲ್ಲಿ ಮುಖಂಡರ ನಿಯೋಗವು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿತು.

ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ

ಕೇಂದ್ರ ಸಚಿವ ಎಚ್.ಡಿ.ಕುವಾರಸ್ವಾಮಿ ಅವರನ್ನು ಹಳ್ಳಿಗುಗ್ಗು ಎಂದು ಕರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಖರ್ಗೆ ಅವರು ವಾಚಾಳಿತನ ಬಿಡದಿದ್ದರೆ ಪಾಠ ಕಲಿಸಲಾಗುವುದು. ದುರಂಹಕಾರ ಬಿಟ್ಟು ವರ್ತಿಸುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.