- ಜಿಬಿಎ ಮುಖ್ಯ ಆಯುಕ್ತರಿಗೆ ಸಂದ ಅಧ್ಯಕ್ಷ ಅಮೃತ್ ರಾಜ್ ಪತ್ರ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಮುಂದೆ ಪಾದಚಾರಿ ಮಾರ್ಗ ಒತ್ತುವರಿ ಕಾರ್ಯಾಚರಣೆಗಳ ವೇಳೆ ಪಾಲಿಕೆ ನೌಕರರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಹಾಗೂ ಕಾರ್ಯಾಚರಣೆಯಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸದ ಮಾರ್ಷಲ್ಗಳ ಸೇವೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಜಿಬಿಎ ಅಧಿಕಾರಿ ಮತ್ತು ನೌಕರರ ಸಂವು ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ಗೆ ಮನವಿ ಸಲ್ಲಿಸಿದೆ.
ಜಿಬಿಎ ಕೇಂದ್ರ ಕಚೇರಿಯಲ್ಲಿ ನೌಕರರ ಸಭೆ ನಡೆಸಿದ ಬಳಿಕ ಸಂದ ಅಧ್ಯ ಎ.ಅಮೃತ್ ರಾಜ್ ನೇತೃತ್ವದಲ್ಲಿ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಜು.21ರಂದು ಶಿವಾಜಿನಗರ ಬಸ್ ನಿಲ್ದಾಣ ಹಾಗೂ ಬೋರಿಂಗ್ ಆಸ್ಪತ್ರೆ ಸುತ್ತಮುತ್ತ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಅಭಿಯಂತರರ ಮೇಲೆ ನಡೆದ ಹಲ್ಲೆ ಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ತ್ವರಿತವಾಗಿ ಮಧ್ಯ ಪ್ರವೇಶಿಸಿ ಎಫ್ಐಆರ್ ದಾಖಲಿಸಿ, 10 ತಾಸಿನೊಳಗೆ ಆರೋಪಿಗಳನ್ನು ಬಂಧಿಸಿರುವ ಕ್ರಮ ಶ್ಲಾನೀಯ. ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳಲ್ಲಿ ನಡೆಯುವ ಎಲ್ಲ ರೀತಿಯ ತೆರವು ಕಾರ್ಯಾಚರಣೆಗಳಿಗೆ ಪೊಲೀಸ್ ಬಂದೋಬಸ್ತ್ ಹಾಗೂ ಅಧಿಕಾರಿ&ನೌಕರರಿಗೆ ಸಮರ್ಪಕ ಭದ್ರತೆ ಒದಗಿಸಬೇಕು. ತೆರವು ಕಾರ್ಯಾಚರಣೆಗಳಲ್ಲಿ ಭಾಗವಹಿಸದೆ, ಯಾವುದೇ ನೆರವು ನೀಡದಿರುವ ಮಾರ್ಷಲ್ಗಳ ಸೇವೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಅಥವಾ ಹಿಂಪಡೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.