ಜಿಬಿಎ 
ಬೆಂಗಳೂರು

ರಾಜಧಾನಿಗರ ಜೀವನ ಗುಣಮಟ್ಟ ಸುಧಾರಣೆ ಆಧ್ಯತೆ|GBA

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕರೆ
  • ಅಧಿಕಾರ ಸ್ವೀಕಾರ, ಅಧಿಕಾರಿಗಳೊಂದಿಗೆ ಮೊದಲ ಸಭೆ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಹೊಂದಿದ್ದ ಕೃಷ್ಣ ಬೈರೇಗೌಡ ಅವರು ಸುಮಾರು 13 ದಿನಗಳ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದು, ರಾಜಧಾನಿಯ 1.5 ಕೋಟಿ ನಿವಾಸಿಗಳ ದಿನನಿತ್ಯದ ಜೀವನ ಗುಣಮಟ್ಟ ಸುಧಾರಣೆ ನಮ್ಮ ಮೊದಲ ಆದ್ಯತೆಯಾಗಬೇಕೆಂದು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಸೋಮವಾರ ಜಿಬಿಎ ಸಭಾಂಗಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಅಪರ ಮುಖ್ಯ ಕಾರ್ಯದರ್ಶಿ, ಗ್ರೇಟರ್​ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ಐದು ಪಾಲಿಕೆಗಳ ಅಯುಕ್ತರು, ಮುಖ್ಯ ಅಭಿಯಂತರರು, ಬಿ&ಸ್ಮೆ$ಲ್​, ಬೆಂಗಳೂರು ನತ್ಯಾಜ್ಯ ನಿರ್ವಹಣೆ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ನಿವಾಸಿಗಳ ಜೀವನ ಗುಣಮಟ್ಟವನ್ನು ವೃದ್ಧಿಸುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸವಾಲುಗಳ ನಗರ:
ಬೆಂಗಳೂರು ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ಬಹಳಷ್ಟು ಸವಾಲುಗಳನ್ನು ಹೊಂದಿರುವ ನಗರವಾಗಿದೆ. ಸುಮಾರು 1.5 ಕೋಟಿ ಜನರಿಗೆ ಆಶ್ರಯ ತಾಣವಾಗಿರುವ ಈ ನಗರವು ಉದ್ಯೋಗ, ಶಿಣ ಹಾಗೂ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜಿಬಿಎ ಆಡಳಿತವನ್ನು ಸುಧಾರಣೆ ಮಾಡುವ ಧ್ಯೇಯದೊಂದಿಗೆ  ಕಾರ್ಯನಿರ್ವಹಿಸಲಾಗುವುದು ಎಂದು ಸಚಿವರು ಹೇಳಿದರು.
ನಗರದಲ್ಲಿದ್ದ ಅಸ್ಪಷ್ಟ ಖಾತೆ ಸಮಸ್ಯೆಗೆ ಪರಿಹಾರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಮಾದರಿಯ ಇ&ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನಗರದ ದೀರ್ಘಾವಧಿಯ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಸಮಗ್ರವಾಗಿ ರೂಪಿಸಲಾಗಿದೆ. ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಾವು ಕೆಲಸ ಮಾಡುತ್ತೇವೆ. ಜತೆಗೆ ಜನರ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸರ್ವಾಂಗೀಣ ಅಭಿವೃದ್ಧಿ
ಸಾಂಸತಿಕ, ಸಾಮಾಜಿಕ, ಕಲಾತ್ಮಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಒಳಗೊಂಡ ಸಮಗ್ರ ಅಭಿವೃದ್ಧಿಯಿಂದ ಮಾತ್ರ ಜೀವನದ ಗುಣಮಟ್ಟ ಸುಧಾರಿಸಲು ಸಾಧ್ಯ. ಈ ನಿಟ್ಟಿನಲ್ಲಿ 360 ಡಿಗ್ರಿ ದೃಷ್ಟಿಕೋನದೊಂದಿಗೆ ಬೆಂಗಳೂರಿನ ಜನರ ಜೀವನ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಪ್ರಯತ್ನ ಮಾಡಲಾಗುವುದು. ಇಂಜಿನಿಯರ್​ ಸೇರಿ ಕೆಲವು ಕೊರತೆ ಇರಬಹುದು, ಆದರೆ ಇರುವ ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಂಡು ಆಡಳಿತದಲ್ಲಿ ಚುರುಕು ಮುಟ್ಟಿಸಿದರೆ ಅನೇಕ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಎಂಬುದು ಕೇವಲ ಒಂದು ರಾಜಕೀಯ ಪಕ್ಕೆ ಸೀಮಿತವಾದುದಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಿರೋಧ ಪದವರು, ಸಂಸದರು ಮತ್ತು ಶಾಸಕರು ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರತಿಯೊಬ್ಬ ನಾಗರಿಕನಿಗೂ ತನಗಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸ್ವಾತಂತ್ರ್ಯವಿದ್ದು, ಅವರ ರಚನಾತ್ಮಕ ಟೀಕೆಗಳನ್ನು ಸರ್ಕಾರವು ಸದಾ ಗೌರವಿಸುತ್ತದೆ. ಇರುವ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸಿದರೆ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು.

ರಸ್ತೆ ನಿರ್ಮಾಣ ರಾಕೆಟ್​ ಸೈನ್ಸಾ?

ಜಿಬಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು: ಗುಂಡಿ ಇಲ್ಲದ ರಸ್ತೆ ನಿರ್ಮಾಣ ಮಾಡುವುದೇನು ರಾಕೆಟ್​ ಸೈನ್ಸಾ? ನೆರೆಹೊರೆಯ ರಾಜ್ಯಗಳಲ್ಲಿ ನೋಡಿ. ನಮಗೆ ಮಳೆ ಬರುವುದು ಗೊತ್ತಿಲ್ವಾ? ರಸ್ತೆ ಎಷ್ಟು ವರ್ಷ ಬಾಳಿಕೆ ಬರಬೇಕು ಎಂಬ ಕನಿಷ್ಠ ಾನ ನಿಮಗಿಲ್ವಾ? ಎಂದು ಬೆಂಗಳೂರಿನ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ರಸ್ತೆ ಗುಂಡಿ ವಿಚಾರವಾಗಿ ತಮ್ಮ ಮೊದಲ ಸಭೆಯಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಜಿಬಿಎ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗ್ರೇಟರ್​ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಅಧಿಕಾರಿಗಳ ಸಭೆ ನಡೆಸಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವುದು, ಗುಂಡಿ ಮುಚ್ಚುತ್ತಿದ್ದಂತೆ ಮತ್ತೊಂದು ಕಡೆ ಗುಂಡಿ ಬಾಯ್ತೆರೆಯುವುದು ವಾಡಿಕೆಯಾಗಿಬಿಟ್ಟಿದೆ. ಇದರ ಬದಲು ಗುಂಡಿ ಬೀಳದಂತೆ ಗುಣಮಟ್ಟದ ರಸ್ತೆ ನಿರ್ಮಿಸಲು ಇರುವ ಸಮಸ್ಯೆಯಾದರೂ ಏನು? ಗುಣಮಟ್ಟದ ರಸ್ತೆ ನಿರ್ಮಾಣವೇನು ರಾಕೆಟ್​ ಸೈನ್ಸ್​ಗಿಂತ ಕ್ಲಿಷ್ಟವೇ? ಎಂದು ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡರು.
ದಣ ಭಾರತದ ಮಟ್ಟಿಗೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನ ರಸ್ತೆಗಳು ತೀರಾ ಕಳಪೆಯಾಗಿವೆ ಎಂದು ಅಭಿಪ್ರಾಯಪಟ್ಟ ಸಚಿವರು, ಇನ್ಮುಂದೆ ಹಳೇ ಕಲ್ಲು ಹೊಸ ಬಿಲ್ಲು ಎಂಬಂತೆ ರಸ್ತೆ ಗುಂಡಿ ಮುಚ್ಚುವ ತಾತ್ಕಾಲಿಕ ಪರಿಹಾರದ ಬದಲಾಗಿ ಅಧಿಕಾರಿಗಳು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಕೆಟ್ಟ ರಸ್ತೆಗಳ ಕಾರಣಕ್ಕೆ ಉಂಟಾಗುತ್ತಿರುವ ಜನರ ಬವಣೆ ನೀಗಬೇಕು. ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳ ಹಿಂದೆ ನಾನು ಎಂದಿಗೂ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.
ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಅನುದಾನ ಲಭ್ಯವಿದೆ. ವ್ಯವಸ್ಥಿತವಾಗಿ ಹಾಗೂ ಗುಣಮಟ್ಟದೊಂದಿಗೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳನ್ನು ತಡೆಯಲು ಸಾಧ್ಯವಾಗುತ್ತದೆ. ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಲು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.
ಕಸದ ಸಮಸ್ಯೆ ನಿವಾರಿಸಿ
ಮನೆ&ಮನೆಗೆ ಕಸ ಸಂಗ್ರಹಿಸುವ ಕಾರ್ಯ ಸಮರ್ಪಕವಾಗಿ ನಿರ್ವಹಿಸಬೇಕು. ಕೆಲವರು ಮನೆ ಬಾಗಿಲಿಗೆ ಕಸ ಸಂಗ್ರಹ ವಾಹನ ಬಂದರೂ ರಸ್ತೆ ಬದಿಯಲ್ಲಿ ಕಸವನ್ನು ತಂದು ಹಾಕುತ್ತಿರುವುದು ಕಂಡುಬರುತ್ತಿದೆ. ಕಸ ಸಂಗ್ರಹಣಾ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ನಾಗರಿಕರ ಸಹಕಾರವೂ ಅಗತ್ಯವಾಗಿದೆ. ಐದು ಪಾಲಿಕೆಗಳನ್ನು ರಚಿಸುವಾಗ ಪಾಲಿಕೆಗಳ ನಡುವೆ ಆದಾಯ ಅಂತರ ಇರಲಿದೆ ಎಂಬ ಅರಿವಿತ್ತು. ಇದನ್ನು ಸರಿಪಡಿಸಲು ಸರ್ಕಾರದ ಬಳಿ ಪರಿಹಾರಗಳಿದ್ದು, ಪರಿಶೀಲನಾ ಹಂತದಲ್ಲಿದೆ. ಇ&ಖಾತಾ, ಬಿ&ಖಾತಾದಿಂದ ಎ&ಖಾತಾ ಪರಿವರ್ತನೆಯಂತಹ ಯೋಜನೆಗಳು ಭವಿಷ್ಯದಲ್ಲಿ ವಂಚನೆ ಮತ್ತು ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತಡೆಗಟ್ಟಲಿದೆ ಎಂದು ಸಚಿವರು ತಿಳಿಸಿದರು.
ಟೆಂಡರ್​ ಪರಿಶೀಲನೆಗೆ ಉನ್ನತ ಸಮಿತಿ
ಕಸದ ಟೆಂಡರ್​ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಅಧಿಕಾರಿಗಳ ಪರಿಶೀಲನಾ ಸಮಿತಿಯನ್ನು ನೇಮಿಸಿದೆ. ಅದು ವಿರೋಧ ಪದವರು ಸಲ್ಲಿಸಿರುವ ದೂರುಗಳು ಮತ್ತು ಆೇಪಣೆಗಳನ್ನು ಪರಿಶೀಲಿಸಲಿದೆ.ಈ ಸಮಿತಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದ್ದು, ಟೆಂಡರ್​ ಪ್ರಕ್ರಿಯೆಯಲ್ಲಿನ ಸರಿ&ತಪ್ಪುಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲಿದೆ. ವಿರೋಧ ಪದವರ ಬಳಿ ಯಾವುದೇ ಪೂರಕ ದಾಖಲೆಗಳಿದ್ದರೂ ನೇರವಾಗಿ ಸಮಿತಿಗೆ ನೀಡಬಹುದು ಎಂದು ಸಚಿವರು ಹೇಳಿದ್ದಾರೆ.

ರಾಜಕೀಯದಲ್ಲಿ ಜವಾಬ್ದಾರಿಯನ್ನು ಸಮಚಿತ್ತದಿಂದ ಸ್ವೀಕರಿಸಬೇಕು

ಬೆಂಗಳೂರು: ರಾಜಕೀಯದಲ್ಲಿ ಸಿಗುವ ಅವಕಾಶ ಹಾಗೂ ಜವಾಬ್ದಾರಿಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಕೆಲಸ ಮಾಡಬೇಕು. ಪ್ರತಿಯೊಬ್ಬರ ಜೀವನದಲ್ಲೂ ಕಹಿ ಇರಲಿದೆ. ನಾನು ಒಬ್ಬ ಮುನಷ್ಯನೇ. ಖಾತೆ ವಿಷಯವಾಗಿ ಮುಖ್ಯಮಂತ್ರಿಗಳ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಮೊದಲು ಅಧಿಕಾರ ವಹಿಸಿಕೊಂಡು ಕೆಲಸ ಆರಂಭಿಸಲು ಸೂಚಿಸಿದ್ದಾರೆ. ಅದರಂತೆ ಕೆಲಸ ಆರಂಭಿಸಿದ್ದೇನೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಖಾತೆ ವಿಷಯವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅಂತಿಮ ವಿವೇಚನೆ ಹಾಗೂ ಹಿರಿಯರ ತೀರ್ಮಾನಕ್ಕೆ ತಲೆಬಾಗುವುದಾಗಿ ಹೇಳಿದರು. ಸಮರ್ಥವಾಗಿ ಆಡಳಿತ ನಡೆಸಬೇಕು ಮತ್ತು ಸಾರ್ವಜನಿಕರಿಗೆ ಉತ್ತರದಾಯಿತ್ವ ಹೊಂದಿರಬೇಕು ಎಂದರೆ ವ್ಯವಸ್ಥೆಯಲ್ಲಿ ಒಂದು ಸ್ಪಷ್ಟತೆ ಇರಬೇಕು. ಈ ಹಿನ್ನೆಲೆಯಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಮುನ್ನ ಮರುಪರಿಶೀಲನೆ ನಡೆಸುವುದು ಸೂಕ್ತ ಎಂಬ ನಿಲುವನ್ನು ಹೊಂದಿದ್ದೆ. ಸಿಎಂ ಮತ್ತು ವರಿಷ್ಠರ ಮಾತಿಗೆ ಗೌರವ ಕೊಟ್ಟು ಜವಾಬ್ದಾರಿ ವಹಿಸಿಕೊಂಡು ಕೆಲಸ ಆರಂಭಿಸುತ್ತಿದ್ದೇನೆ ಎಂದು ತಿಳಿಸಿದರು.