ಎಫ್ಕೆಸಿಸಿಐ ಎಂಎಸ್ಎಂಇ ದಿನಾಚರಣೆ
- ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ
- ಎಂಎಸ್ಎಂಇ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜ್ಯ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂಎಸ್ಎಂಇ) ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ "ಇ&-ಖಾತಾ ಮತ್ತು ನಗರ ಅಭಿವೃದ್ಧಿ' ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮತ್ತು ದೇಶದಲ್ಲಿ ಅತಿಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವುದು ಎಂಎಸ್ಎಂಇ ವಲಯ. ದೇಶದ ಜಿಡಿಪಿಗೆ ಶೇ.31 ಹಾಗೂ ರಫ್ತು ವಲಯಕ್ಕೆ ಶೇ.45ರಿಂದ 48 ಕೊಡುಗೆಯನ್ನು ಈ ವಲಯ ನೀಡುತ್ತಿದ್ದು, ಇದನ್ನು ಯಾವುದೇ ಸರ್ಕಾರ ರ್ನಿಲಕ್ಷಿಸಲು ಸಾಧ್ಯವಿಲ್ಲ ಎಂದರು.
ಗ್ರಾಮೀಣ ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗುವ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆ ಪಾವತಿ ಕುರಿತು ಇರುವ ಗೊಂದಲಗಳನ್ನು ಬಗೆಹರಿಸಲಾಗುವುದು. ಈ ಬಗ್ಗೆ ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಆಸ್ತಿಗಳನ್ನು ಪಾಲಿಕೆ ವ್ಯಾಪ್ತಿಗೆ ಸಮರ್ಪಕವಾಗಿ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಾರದರ್ಶಕತೆ ಹಾಗೂ ತ್ವರಿತ ಸೇವೆಗಾಗಿ ಇ-&ಖಾತಾ ವ್ಯವಸ್ಥೆ ಇದೆ. ಪ್ರಸ್ತುತ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ಸುಮಾರು 20.26 ಲಕ್ಷ ಆಸ್ತಿಗಳ ಪೈಕಿ ಶೇ.40 ಆಸ್ತಿಗಳಿಗೆ ಮಾತ್ರ ಇ-&ಖಾತಾ ನೀಡಲಾಗಿದೆ. ತಾಂತ್ರಿಕ ತೊಂದರೆಗಳು ಮತ್ತು ಕಾಗುಣಿತ ದೋಷಗಳತಿದ್ದುಪಡಿಗೆ ಈಗಾಗಲೇ ಶೇ.10 ವಿನಾಯಿತಿ ನೀಡಲಾಗಿದ್ದು, ಇದನ್ನು ಇನ್ನಷ್ಟು ಸರಳಗೊಳಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ ಮಾತನಾಡಿ, ನಾಗರಿಕರ ಜತೆಗೆ ಉದ್ಯಮಿಗಳ ಹಿತಕ್ಕಾಗಿಯೇ ಇ&ಖಾತಾವನ್ನು ಸರ್ಕಾರ ತಂದಿದೆ. ಆಸ್ತಿ ಮಾಲೀಕರಿಗೆ ಆನ್ಲೈನ್ನಲ್ಲಿ ಸುಲಭವಾಗಿ ಆಸ್ತಿ ತೆರಿಗೆ ಪಾವತಿಸಲು ಮತ್ತು ಬ್ಯಾಂಕ್ ಸಾಲಗಳನ್ನು ಪಡೆಯಲು ಸಾಧ್ಯವಾಗಲಿದೆ. ಅಲ್ಲದೆ, ಇದು ನಕಲಿ ದಾಖಲೆಗಳನ್ನು ತಡೆಗಟ್ಟಿ, ಆಸ್ತಿ ಖರೀದಿಯಲ್ಲಿ ಪಾರದರ್ಶಕತೆ ಮತ್ತು ಕಾನೂನುಬದ್ಧ ಸುರಕ್ಷತೆಯನ್ನು ತರುವ ಉದ್ದೇಶ ಹೊಂದಿದೆ ಎಂದರು.
ಎ್ಕೆಸಿಸಿಐ ಅಧ್ಯೆ ಉಮಾ ರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಆರ್. ಶಿವಕುಮಾರ್, ಉಪಾಧ್ಯಕ್ಷರಾದ ಸಾಯಿರಾಂ ಪ್ರಸಾದ್, ಶಶಿಧರ್, ಅರವಿಂದ್ ಬುರ್ಜಿ, ತಲ್ಲಂ ವೆಂಕಟೇಶ್, ಸುಜ್ಞಾನ್ ಹಿರೇಮಠ, ರಾಜೇಂದ್ರಕುಮಾರ್ ಸೇರಿ ಪದಾಧಿಕಾರಿಗಳು, ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿದ್ದರು.
ವಿವಿಧ ಇಲಾಖೆಗಳಿಂದ ಪರವಾನಗಿ ಮತ್ತು ಪ್ರಮಾಣಪತ್ರಗಳನ್ನು ಪಡೆಯಲು ಉದ್ಯಮಿಗಳಿಗೆ ಆಗುತ್ತಿರುವ ಸಮಯದ ವಿಳಂಬವನ್ನು ತಪ್ಪಿಸಲು, ಕೈಗಾರಿಕೆಗಳಿಗಾಗಿಯೇ ಪ್ರತ್ಯೇಕವಾಗಿ "ಏಕಗವಾಕ್ಷಿ' ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಕ್ರಮ ವಹಿಸಲಾಗವುದು. ಎಫ್ಕೆಸಿಸಿಐ ನೀಡುವ ರ್ನಿದಿಷ್ಟ ಸಮಸ್ಯೆಗಳ ಲಿಖಿತ ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಕೈಗಾರಿಕಾ ವಲಯದ ಏಳಿಗೆಗೆ ಶ್ರಮಿಸಲಾಗುವುದು.