"ಲೋಕ ಸಂವರ್ಧನ್​ ಪರ್ವ-2026' ಕುರಿತು ಸಚಿವ ಯು.ಟಿ. ಖಾದರ್​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.  
ಬೆಂಗಳೂರು

ಸೆ.26ರಿಂದ "ಲೋಕ ಸಂವರ್ಧನ್​ ಪರ್ವ'

ಕಿರುವಾರ ಎಸ್.ಸುದರ್ಶನ್

ಪ್ರಮುಖ ಮುಖ್ಯಾಂಶಗಳು

  • ಸಚಿವ ಯು.ಟಿ. ಖಾದರ್​ ಮಾಹಿತಿ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ವತಿಯಿಂದ ಸೆ.26ರಿಂದ 30ರವರೆಗೆ "ಲೋಕ ಸಂವರ್ಧನ್​ ಪರ್ವ- 2026' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ 26ರಂದು ಬೆಳಗ್ಗೆ 11ಕ್ಕೆ ಸಿಎಂ ಡಿ.ಕೆ. ಶಿವಕುಮಾರ್​, ಕೇಂದ್ರ ಸಚಿವ ಕಿರಣ್​ ರಿಜಿಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಾ.ಜಿ. ಪರಮೇಶ್ವರ್​, ಸಚಿವರಾದ ಕೆ.ಜೆ. ಜಾರ್ಜ್​, ಜಮೀರ್​ ಅಹಮದ್​, ರಿಜ್ವಾನ್​ ಅರ್ಷದ್​, ಪ್ರಿಯಾಂಕ್​ ರ್ಖಗೆ ಇತರರು ಭಾಗವಹಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಇಲಾಖೆ ಸಚಿವ ಯು.ಟಿ. ಖಾದರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ, ಸಂವಾದಗಳನ್ನು ಏರ್ಪಡಿಸಿ ಕೃತಕ ಬುದ್ಧಿಮತ್ತೆ (ಎಐ) ಮತ್ತಿತರ ತಂತ್ರಜ್ಞಾನಗಳ ಕುರಿತು ಮಾಹಿತಿ ಒದಗಿಸಲಾಗುವುದು. ದೇಶದ ವಿವಿಧ ಭಾಗಗಳಿಂದ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಕರಕುಶಲಕರ್ಮಿಗಳು ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ 180 ಮಳಿಗೆಗಳನ್ನು ವ್ಯವಸ್ಥೆ ಮಾಡುವ ಉದ್ದೇಶವಿದ್ದು, ಇದಕ್ಕಾಗಿ ಎಲ್ಲ ವರ್ಗದವರು ಅರ್ಜಿ ಸಲ್ಲಿಸಿ ನೋಂದಾಯಿಸಬೇಕು. ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯಲಿರುವ ವಸ್ತುಗಳ ಪ್ರದರ್ಶನ ಬಳಿಕ ಮನರಂಜನಾ ಕಾರ್ಯಕ್ರಮಗಳಿರಲಿವೆ ಎಂದು ಮಾಹಿತಿ ನೀಡಿದರು.
ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಂಡಳಿ ಅಧ್ಯಕ್ಷ ನಾಗೇಂದ್ರ, ಇಲಾಖೆಯ ಕಾರ್ಯದರ್ಶಿ ಮನೋಜ್​ ಜೈನ್​. ನಿರ್ದೇಶಕಿ ಯಾಸ್ಮೀನ್​ ಬೇಗಂ ಇದ್ದರು.