ಮೆಟ್ರೋ 
ಬೆಂಗಳೂರು

ಭಾನುವಾರ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ | metro

ಪವನ್ ಆಚಾರ್ಯ ನೀರ್ಚಾಲು
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಏ.5ರಂದು ಕೈಗೊಳ್ಳಲಾಗುತ್ತಿದ್ದು, ಆ ದಿನ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್​ಸಿಎಲ್​) ಮಾಹಿತಿ ನೀಡಿದೆ.
ಈ ಕಾಮಗಾರಿಯನ್ನು ನಡೆಸಲು ನೇರಳೆ ಮಾರ್ಗದಲ್ಲಿ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ಯಾಣ- ಮಜೆಸ್ಟಿಕ್​ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
ಇತರ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ- ಮಜೆಸ್ಟಿಕ್​ನಿಂದ ಕಾಡುಗೋಡಿ, ಮಾದಾವರದಿಂದ ರೇಷ್ಮೆ ಸಂಸ್ಥೆ ಮತ್ತು ಆರ್​.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲ ರ್ಟಮಿನಲ್​ ನಿಲ್ದಾಣಗಳಿಂದ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.
ಬೆಳಗ್ಗೆ 9 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್​ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ.