ಬೆಂಗಳೂರು: ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮುಕ್ತ ವಿದ್ಯಾಲಯ ಶಿಕ್ಷಣ ಸಂಸ್ಥೆಯ (ಎನ್ಐಒಎಸ್) ವತಿಯಿಂದ ನಡೆಸುವ ಸೈದ್ಧಾಂತಿಕ ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಲಾಗಿದೆ.
ಇಂದಿನಿಂದ (ಅ,22)ರಿಂದ ಅಧಿಕೃತವಾಗಿ ಆರಂಭವಾಗಿ, ಡಿಸೆಂಬರ್ 7, 2026 ರವರೆಗೆ. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿಪಡಿಸಲಾಗಿದೆ. ಇನ್ನೂ ಸೀನಿಯರ್ ಸೆಕೆಂಡರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಿಂದ ಅ.22ರಿಂದ ಡಿಸೆಂಬರ್ 5ರವರೆಗೂ ಪರೀಕ್ಷೆಗಳು ನಡೆಯಲಿದೆ ಎಂದು ರಾಷ್ಟ್ರೀಯ ಮುಕ್ತ ವಿದ್ಯಾಲಯ ಶಿಕ್ಷಣ ಸಂಸ್ಥೆಯ (ಎನ್ಐಒಎಸ್) ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23464223-22 ಸಂಪರ್ಕಿಸಬಹುದು. ಪರೀಕ್ಷಾ ಸಮಯ ಶುರುವಾಗ ಅರ್ಧಗಂಟೆಗೂ ಮುನ್ನವೇ ಪರೀಕ್ಷಾ ಕೇಂದ್ರದ ಮುಂದೆ ಹಾಜರಿರುವಂತೆ ಸೂಚಿಸಿದೆ, (ಏಜೆನ್ಸೀಸ್).