ನಗರದಲ್ಲಿ ಗಣೇಶ ಮೂರ್ತಿಗಳ ಮಾರಾಟ ಮಳಿಗೆಯ ಮೇಲೆ ದಾಳಿ ನಡೆಸಿರುವ ವಿಶೇಷ ತನಿಖಾದಳದ ತಂಡದ ಅಧಿಕಾರಿಗಳು. 
ಬೆಂಗಳೂರು

ಪಿಒಪಿ ಗಣೇಶ ಮೂರ್ತಿಗಳ ವಶ

ಕಿರುವಾರ ಎಸ್.ಸುದರ್ಶನ್
ಬೆಂಗಳೂರು: ಗಣೇಶ ಮೂರ್ತಿಗಳ ಮಾರಾಟ ಮಳಿಗೆಗಳ ಮೇಲೆ ವಿಶೇಷ ತನಿಖಾದಳದ ಅಧಿಕಾರಿಗಳು ಆ.18ರಿಂದ ಇಲ್ಲಿಯವರೆಗೆ ರಾಜ್ಯಾದ್ಯಂತ 357 ದಾಳಿ ನಡೆಸಿ 2,564 ಪಿಒಪಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದೆ. ಪರಿಸರ ಹಾನಿಕಾರಕ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಮತ್ತು ಪ್ರತಿಷ್ಠಾಪನೆಯನ್ನು ಸರ್ಕಾರ ನಿಷೇಧಿಸಿ ಆದೇಶಿಸಿದೆ.
ಆದರು ಸಹ ಕೆಲವರು ಸರ್ಕಾರದ ಕಣ್ಣು ತಪ್ಪಿಸಿ ನಿಷೇಧಿತ ಗಣೇಶ ಮೂರ್ತಿಗಳನ್ನು ತಯಾರಿಸಿ, ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಇದರ ಹಿನ್ನಲೆಯಲ್ಲಿ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯಾದ್ಯಂತ ವಿಶೇಷ ತನಿಖಾದಳ ರಚಿಸಿ ಮಾರ್ಗಸೂಚಿಗಳನ್ನು ನೀಡಿದ್ದರು.
ಬೆಂಗಳೂರು ನಗರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸ, ಕೊಡಗು, ಮಂಗಳೂರು, ಚಿಕ್ಕಮಗಳೂರು, ಕಾರವಾರ, ಉಡುಪಿ, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲ್ಬುರ್ಗಿ, ಬೀದರ್​, ಯಾದಗಿರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದು, ಮುಂದಿನ ದಿನಗಳಲ್ಲೂ ಪರಿಸರ ನಿಯಂತ್ರಣ ಪ್ರಾಧಿಕಾರ, ಸ್ಥಳಿಯ ಸಂಸ್ಥೆ, ಪೊಲೀಸ್​ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಲಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಜರುಗಿಸಲಿದ್ದಾರೆ.