ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನ ನೀಡುವ ಕನ್ನಡಪರ ಹೋರಾಟ ರತ್ನ ಪ್ರಶಸ್ತಿಗೆ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ. ತಿಮ್ಮಯ್ಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 5 ಸಾವಿರ ರೂ. ನಗದು ಒಳಗೊಂಡಿದೆ. ವಿ. ರಾಣಿ ಗೋವಿಂದರಾಜು ಪ್ರಶಸ್ತಿಗೆ ಸಂಬಂಧಿಸಿದಂತೆ ದತ್ತಿ ಸ್ಥಾಪಿಸಿದ್ದಾರೆ. ಬುಧವಾರ (ನ.4) ಸಂಜೆ 5 ಗಂಟೆಗೆ ಎನ್.ಆರ್. ಕಾಲನಿಯಲ್ಲಿರುವ ಬಿ.ಎಂ.ಶ್ರೀ. ಕಲಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕನ್ನಡ ಪರ ಹೋರಾಟಗಾರ ವ.ಚ. ಚನ್ನೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.