ರಾಜ್ಯದಲ್ಲಿ ಮಳೆ 
ಬೆಂಗಳೂರು

ರಾಜ್ಯದಲ್ಲಿ 5 ದಿನ ಮಳೆ: ದಕ್ಷಿಣ ಕರ್ನಾಟಕದಲ್ಲಿ ತುಸು ಬಿರುಸು- rain

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆ.ದಕ್ಷಿಣ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರಿನಲ್ಲಿ ಸೆ.30ರಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಕೊಟ್ಟಿದೆ.

ಬೆಂಗಳೂರು: ದಕ್ಷಿಣ ಕರ್ನಾಟಕದ ಭಾಗದಲ್ಲಿ ಮುಂದಿನ 5 ದಿನ ಜೋರು ಮಳೆಯಾದರೆ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಸಾಧಾರಣವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆ.ದಕ್ಷಿಣ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರಿನಲ್ಲಿ ಸೆ.30ರಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಕೊಟ್ಟಿದೆ. ಕೊಡಗು, ಮೈಸೂರಿನಲ್ಲಿ ಸೆ.29ರಿಂದ ಮುಂದಿನ 3 ದಿನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದಲ್ಲಿ ಸೆ.30 ಮತ್ತು ಅ.1ರಂದು ಜೋರು ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಚಾಮರಾಜನಗರದಲ್ಲಿ ಸೆ.29ರಂದು ಯೆಲ್ಲೋ ಅಲರ್ಟ್ ಇರಲಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯಲಿದೆ. ಪ್ರಸಕ್ತ ಮುಂಗಾರು ಮುಗಿಯಲು 2 ದಿನ ಬಾಕಿ ಇದೆ. ಅ.1ರಿಂದ ಈಶಾನ್ಯ ಮಾನ್ಸೂನ್ ಶುರುವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.