ಡಾ.ವಿ.ರಾಮ್ ಪ್ರಸಾತ್ ಮನೋಹರ್
- ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆ
ಬೆಂಗಳೂರು: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ "ಸ್ಮಾರ್ಟ್ ವಾಟರ್ ನೆಟ್ವರ್ಕ್ಸ್ ಫೋರಂ' ತನ್ನ 5ನೇ ಹಿರಿಯ ಯುಟಿಲಿಟಿ ಸಲಹಾ ಸಮಿತಿಯನ್ನು ಪ್ರಕಟಿಸಿದೆ. ಈ ಜಾಗತಿಕ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆಯಾಗಿದ್ದಾರೆ. ಉಳಿದಂತೆ ಆಸ್ಟ್ರೆಲಿಯಾ, ಕೆನಡಾ, ಪೋರ್ಚುಗಲ್, ಬ್ರೆಜಿಲ್ ಮತ್ತು ಅಮೆರಿಕದ ತಜ್ಞರು ಸಮಿತಿಯಲ್ಲಿದ್ದಾರೆ.
ಆಯ್ಕೆಯಾದ ಸಮಿತಿ ಸದಸ್ಯರು ಜಾಗತಿಕಮಟ್ಟದಲ್ಲಿ ನೀರಿನ ಸವಾಲುಗಳು, ಪ್ರಾದೇಶಿಕ ಟ್ರೆಂಡ್ಗಳು ಮತ್ತು ಕಾರ್ಯತಂತ್ರದ ಸಂಶೋಧನಾ ಆದ್ಯತೆಗಳನ್ನು ಗುರುತಿಸಲು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಉದ್ಯಮಕ್ಕೆ ನೀಡಿದ ವ್ಯಾಪಕ ಕೊಡುಗೆಯ ಆಧಾರದ ಮೇಲೆ ಆಯ್ಕೆಯಾಗಿರುವ ಈ ತಂಡ, "ಸ್ವಾನ್'ನ ಭವಿಷ್ಯದ ಯೋಜನೆಗಳು ಮತ್ತು ಜಾಗತಿಕ ಉಪಕ್ರಮಗಳನ್ನು ಪರಿಶೀಲಿಸಲಿದೆ.
ಜಲಮಂಡಳಿಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ-ಆಧಾರಿತ ಉಪಕ್ರಮಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಕ್ಕಾಗಿ ಡಾ.ರಾಮ್ ಪ್ರಸಾತ್ಗೆ ಮನ್ನಣೆ ದೊರೆದಂತಾಗಿದೆ. ಜೂ. 2ರಿಂದ 4ರ ವರೆಗೆ ಅಮೆರಿಕದ ಫ್ಲೋರಿಡಾದ ಟ್ಯಾಂಪಾದಲ್ಲಿ ನಡೆಯಲಿರುವ "ಸ್ವಾನ್ 16ನೇ ವಾರ್ಷಿಕ ಸಮ್ಮೇಳನ'ದಲ್ಲಿ ತಜ್ಞರು ವಿಚಾರವಿನಿಮಯ ನಡೆಸಲಿದ್ದಾರೆ.
ಜಲಮಂಡಳಿಯ ತಾಂತ್ರಿಕ ತಂಡ ಮತ್ತು ಸಿಬ್ಬಂದಿಯ ಅವಿರತ ಶ್ರಮಕ್ಕೆ ನಾನು ಈ ಮೈಲಿಗಲ್ಲನ್ನು ಅರ್ಪಿಸುತ್ತೇನೆ. ನಾವು ಎದುರಿಸುತ್ತಿರುವ ಸಂಕೀರ್ಣ ನೀರಿನ ಸವಾಲುಗಳಿಗೆ ಪ್ರಾಯೋಗಿಕ ಪರಿಹಾರಗಳನ್ನು ಕಂಡುಕೊಳ್ಳಲು ಜಾಗತಿಕ ತಜ್ಞರೊಂದಿಗೆ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.
* ಡಾ.ರಾಮ್ ಪ್ರಸಾತ್ ಮನೋಹರ್, ಅಧ್ಯಕ್ಷ, ಬೆಂಗಳೂರು ಜಲಮಂಡಳಿ (ಭಾರತ)
* ಜೊನೆಟ್ಟಾ ಇ. ಇಂಗ್ಲಿಷ್ ಲೂಯಿಸ್ವಿಲ್ಲೆ ಎಂಎಸ್ಡಿ (ಅಮೆರಿಕ)
* ಡೇವಿಡ್ ಹ್ಯೂಸ್-ಓವನ್ ಸಿಇಒ ಬಸ್ಸೆಲ್ಟನ್ ವಾಟರ್ (ಆಸ್ಟ್ರೆಲಿಯಾ)
* ಜೋವಾನಾ ಅರಾಜೊ ಅಗ್ವಾಸ್ ಇ ಎನರ್ಜಿಯಾ ದೋ ಪೋರ್ಟೊ (ಪೋರ್ಚುಗಲ್)
* ಅರಾಶ್ ಫರಾಜಿಯಾನ್ ಟೊರೊಂಟೊ ವಾಟರ್ (ಕೆನಡಾ)
* ಡೆನಿಸ್ ಮಾಯಾ ಸಬೆಸ್ಪ್ (ಬ್ರೆಜಿಲ್)