ಛತ್ತೀಸ್‌ಗಢ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ರಾಯ್‌ಪುರದಲ್ಲಿ ಆಯೋಜಿಸಿರುವ ರಾಜ್ಯೋತ್ಸವ ಕಾರ್ಯಕ್ರಮವನ್ನು ಕೇಂದ್ರ ಸಚಿವ ಡಾ.ಮನಸುಖ್ ಮಾಂಡವಿಯಾ ಉದ್ಘಾಟಿಸಿದರು. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಇತರರು ಇದ್ದರು. 
ಬೆಂಗಳೂರು

ಛತ್ತೀಸ್‌ಗಢದಿಂದ ಭಾರತದ ಕನಸು ನನಸು

* ಕೇಂದ್ರ ಸಚಿವ ಮನಸುಖ್ ಮಾಂಡವಿಯಾ ಅಭಿಮತ * ಮೂರು ದಿನಗಳ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ

ರಾಯ್‌ಪುರ: ಅಭಿವೃದ್ಧಿ ಹೊಂದಿದ ಛತ್ತೀಸ್‌ಗಢವು ಅಭಿವೃದ್ಧಿ ಪಥದಲ್ಲಿರುವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಮನಸುಖ್ ಮಾಂಡವಿಯಾ ಹೇಳಿದ್ದಾರೆ.

ಛತ್ತೀಸ್‌ಗಢ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ರಾಯ್‌ಪುರದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ರಾಜ್ಯೋತ್ಸವ ಕಾರ್ಯಕ್ರಮವನ್ನು ಛತ್ತೀಸ್‌ಗಢ ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ನೇತೃತ್ವದಲ್ಲಿ ರಾಜ್ಯವು ಮೂಲಸೌಕರ್ಯ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ ಹಾಗೂ ಸಾರ್ವಜನಿಕ ಕಲ್ಯಾಣ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದರು.

ಛತ್ತೀಸ್‌ಗಢದಂತಹ ರಾಜ್ಯಗಳು, ಅವುಗಳ ಶ್ರೀಮಂತ ಸಂಪನ್ಮೂಲಗಳು, ಅದ್ಭುತ ಸಂಸ್ಕೃತಿ ಮತ್ತು ಅಪಾರ ಸಾಮರ್ಥ್ಯದೊಂದಿಗೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯನ್ನು ಸಾಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನಂತೆ ರಚನೆಯಾದ ಛತ್ತೀಸ್‌ಗಢ ಇಂದು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗುತ್ತಿದೆ. ರಾಜ್ಯದ ಬುಡಕಟ್ಟು ಸಂಸ್ಕೃತಿ, ನೈಸರ್ಗಿಕ ಸಂಪನ್ಮೂಲಗಳು ಮತ್ತು ಜನರ ಪರಿಶ್ರಮ ಅಭಿವೃದ್ಧಿಗೆ ಪ್ರಮುಖ ಶಕ್ತಿಗಳಾಗಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಸರ್ಕಾರ ಜನಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ. ರಾಜ್ಯದಲ್ಲಿ ಬಡವರಿಗಾಗಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಸಾವಿರಾರು ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಮಹತಾರಿ ವಂದನ ಯೋಜನೆಯಡಿ 68 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ನಕ್ಸಲ್ ವಾದದ ಸವಾಲುಗಳನ್ನು ಎದುರಿಸುತ್ತಿದ್ದ ಬಸ್ತಾರ್ ಪ್ರದೇಶವು ಇದೀಗ ಶಾಂತಿ, ವಿಶ್ವಾಸ ಮತ್ತು ಅಭಿವೃದ್ಧಿಯ ಹೊಸ ಯುಗದತ್ತ ಸಾಗುತ್ತಿದೆ. ಭದ್ರತಾ ಪಡೆಗಳ ಧೈರ್ಯ ಹಾಗೂ ಸ್ಥಳೀಯ ಜನರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ ಎಂದು ಹೇಳಿದರು.