ಮಹಾರಾಷ್ಟ್ರದ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ಸಲೀಂ ಅಹ್ಮದ್  
ಬೆಂಗಳೂರು

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಲೀಂ ಅಹ್ಮದ್ ಭರ್ಜರಿ ಪ್ರಚಾರ

ಬೆಂಗಳೂರು: ಮಹಾರಾಷ್ಟ್ರದಲ್ಲಿ (Maharashtra) ಕಾವೇರಿದ ಮಹಾನಗರ ಪಾಲಿಕೆ (municipal elections
) ಚುನಾವಣೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, (Salim Ahmed ) ಭರ್ಜರಿ ಪ್ರಚಾರ ನಡೆಸಿದರು.
ಮಹಾರಾಷ್ಟ್ರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಸಲೀಂ ಅಹ್ಮದ್ ಅವರನ್ನು ನಿಯೋಜನೆ ಮಾಡಿ ಎಐಸಿಸಿ (AICC) ವರಿಷ್ಠರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ ಸಲೀ ಅಹ್ಮದ್, ಮುಂಬಾದೇವಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸೋಮವಾರ ಚುನಾವಣಾ (election) ಪ್ರಚಾರ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದರೇ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡುವ ಮೂಲಕ ಮತದಾರರ ಮನಸೆಳೆದರು.
ಮತದಾರರು ಸಹ ಸಲೀಂ ಅಹ್ಮದ್ ಅವರನ್ನು ಸ್ವಾಗತಿಸಿಕೊಂಡು ಮನೆ ಮನೆ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ಮುಂಬಾದೇವಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಮಿನ್ ಪಟೇಲ್ ಮತ್ತು ಮತ್ತಿತರರ ಮುಖಂಡರು ಉಪಸ್ಥಿತರಿದ್ದರು.