ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

=ಅಪಘಾತದಲ್ಲಿ ಗಾಯಗೊಂಡವ ಸಾವು

ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ಸೋಲೂರು ಸರ್ವೀಸ್​ ರಸ್ತೆಯಲ್ಲಿ ಶನಿವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಲಿಸದೆ ಸೋಮವಾರ ಮೃತಪಟ್ಟಿದ್ದಾನೆ.
ಮೈಸೂರಿನ ಸೂರ್ಯ (40) ಮೃತ. ಶನಿವಾರ ರಾತ್ರಿ ನೆಲಮಂಗಲ ಕಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಸೂರ್ಯ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. ಕುದೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.