ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಬೊಲೆರೋ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ಕನಕಪುರ: ರಾಮನಗರ&ಚಿಕ್ಕೇನಹಳ್ಳಿ ರಸ್ತೆಯಲ್ಲಿ ಬಳಿ ಬೊಲೆರೋ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತಾಲೂಕಿನ ಚಿಕ್ಕೇನಹಳ್ಳಿ ಸಮೀಪದ ಕೆಂಬರಲು ಗ್ರಾಮದ ಸಾಗರ್​(24) ಮೃತ. ರಾಮನಗರ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿಯಾದ್ದು, ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್​ ಸಬ್​ಇನ್​ಸ್ಪೆಕ್ಟರ್​ ಆಕಾಶ್​ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.