ಮಾಗಡಿ: ತಾಲೂಕಿನ ಹುಚ್ಚಹನುಮೇಗೌಡನ ಪಾಳ್ಯದಲ್ಲಿ ಡಿವೈಡರ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ನ ಆರ್.ರಾಕೇಶ್ ಮೃತ.
ಬೆಂಗಳೂರಿನ ದೊಮ್ಮಸಂದ್ರ ಕೆಪಿಟಿಸಿಎಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ ಸ್ವಗ್ರಾಮಕ್ಕೆ ಬೈಕ್ನಲ್ಲಿ ತೆರಳುವಾಗ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತೀವ್ರ ರಕ್ತ ಸ್ರಾವವಾಗಿದೆ ಎನ್ನಲಾಗಿದೆ. ಮೃತದೇಹವನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.