ಕನಕಪುರದಲ್ಲಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದೊಡ್ಡತಾಂಡ್ಯ ಗ್ರಾಮದ ರಮೇಶ್ನಾಯ್ಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಕನಕಪುರ: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಲಿಸದೆ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ತಾಲೂಕಿನ ಕಸಬಾ ಹೋಬಳಿ ದೊಡ್ಡತಾಂಡ್ಯ ಗ್ರಾಮದ ರಮೇಶ್ನಾಯ್ಕ (48) ಮೃತ.
ಹಾರೋಹಳ್ಳಿ ಸಮೀಪದ ಜೈನ್ ಕಾಲೇಜ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್ ಭಾನುವಾರ ರಾತ್ರಿ ಸ್ವಗ್ರಾಮಕ್ಕೆ ಬರುತ್ತಿದ್ದ ವೇಳೆ ಮತ್ತೊಂದು ಬೈಕ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.