ಕುದೂರು: ಸೋಲೂರು ಹೋಬಳಿಯ ಭದ್ರಾಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ&75ರಲ್ಲಿ ಭಾನುವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಬೆಂಗಳೂರಿನ ಚಿಕ್ಕಬಿದರಕಲ್ಲು ನಿವಾಸಿ ಸರ್ದಾರ್ ಪಾಷಾ (67) ಮೃತ. ಸೋಲೂರು ಹೋಬಳಿಯ ಉಮರ್ ಸಾಬ್ ಪಾಳ್ಯದ ದರ್ಗಾಗೆ ಪೂಜೆ ಸಲ್ಲಿಸಲು ಸಂಬಂಧಿಗಳೊಂದಿಗೆ ಆಗಮಿಸಿದ್ದ ಸರ್ದಾರ್ ಪಾಷಾ, ಪೂಜೆ ಮುಗಿಸಿ ಮನೆಗೆ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದಾಗ ಕುಣಿಗಲ್ ಕಡೆಯಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ನಿಂದ ನೆಲಕ್ಕೆ ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸರ್ದಾರ್ ಪಾಷಾ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.