ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬಿಡದಿ: ಕೆಂಪನಹಳ್ಳಿ ಗೇಟ್​ ಬಳಿಯ ಖಾಸಗಿ ಜಮೀನಿಗೆ ಅಳವಡಿಸಿದ್ದ ಕಲ್ಲಿನ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
ಸೋಮವಾರ ರಾತ್ರಿ ಟನೆ ನಡೆದಿದೆ ಎನ್ನಲಾಗಿದ್ದು, ಮಂಗಳವಾರ ಬೆಳಗ್ಗೆ ಶವ ನೋಡಿದ ಸ್ಥಳಿಯರು ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಮೇಲ್ನೋಟಕ್ಕೆ ಆತನೇ ನೇಣು ಬಿಗಿದುಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.