ಬಿಡದಿ: ಸಮೀಪದ ನಲ್ಲಿಗುಡ್ಡೆ ಕೆರೆಯಲ್ಲಿ ಸೋಮವಾರ ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದೆ.
ಬೆಳಗ್ಗೆ ವಾಯು ವಿಹಾರಕ್ಕೆ ಬಂದವರು ಶವ ಕಂಡು ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹವನ್ನು ಹೊರತೆಗೆದು, ರಾಜರಾಜೇಶ್ವರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.