ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠೀ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ಡಿಎಸ್​ಎಸ್​ ನಿಂದ ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.  
ಬೆಂಗಳೂರು ದಕ್ಷಿಣ

ದಲಿತ ಸಂಘರ್ಷ ಸಮಿತಿಯಿಂದ ಕೇಂದ್ರದ ವಿರುದ್ಧ ಪ್ರತಿಭಟನೆ

ಪ್ರಮುಖ ಮುಖ್ಯಾಂಶಗಳು

  • ರಾಮನಗರ ಐಜೂರು ವೃತ್ತದಲ್ಲಿ ಪ್ರತಿಭಟನೆ
  • ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ರಾಮನಗರ : ನೀಟ್​ ಪರೀಕ್ಷೆ ನಡೆಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರವು ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇಂರ್ದ್ರ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್​-ಮಂತರ್​ನಲ್ಲಿ ಸಾವಿರಾರು ವಿದ್ಯಾರ್ಥಿಗಳು ಪರಿಸರ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್​ ವಾಂಗ್ಚುಕ್​ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ದಲಿತ ಸಂಘಷರ್ ಸಮಿತಿ ಜಿಲ್ಲಾ ಘಟಕವು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರಸ್ವಾಮಿ, ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಈಗ ಮರು ಪರೀಕ್ಷೆ ಎದುರಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಇದರಿಂದ ನೊಂದಿರುವ ಕುಟುಂಬದವರಿಗೆ ಕೇಂದ್ರ ಸರ್ಕಾರ ಕನಿಷ್ಠ ಸಾಂತ್ವಾನವನ್ನೂ ಹೇಳಿಲ್ಲ. ನೊಂದ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಮುಂದಿನ ದಿನಗಳಲ್ಲಿ ನೀಟ್​ ಪರೀಕ್ಷೆಗಳನ್ನು ಕೇಂದ್ರದ ಬದಲು ರಾಜ್ಯ ಸರ್ಕಾರಗಳು ನಡೆಸುವಂತಹ ವ್ಯವಸ್ಥೆ ಮಾಡಬೇಕು. ಕಳೆದ 10 ವರ್ಷಗಳಲ್ಲಿ 150 ನೀಟ್​ ಮತ್ತು ಯುಪಿಎ ಪರೀಕ್ಷೆಗಳು ರದ್ದಾಗಿರುವುದರಿಂದ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಅಮಾಯಕ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ಖಂಡಿಸುತ್ತಾ, ಪೊಲೀಸರ ಮೇಲೆ ಕ್ರಮಕೈಗೊಳ್ಳಬೇಕು. ಇಂದು ಜಿಲ್ಲಾ ಕೇಂದ್ರದಲ್ಲಿ ದಲಿತ ಸಂಘರ್ಫಿ ಸಮಿತಿಯು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಬೇಡಿಕೆ ಈಡೇರದಿದ್ದರೆ ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಿರಿಯ ಮುಖಂಡ ಶಿವಶಂಕರ್​, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಚಾಲಕ ಶಿವಶಂಕರ್​, ಜಿಲ್ಲಾ ಸಂಘಟನಾ ಸಂಚಾಲಕ ಶಿವಣ್ಣ, ತಾಲೂಕು ಸಂಚಾಲಕ ನಂಜುಂಡಯ್ಯ, ಚನ್ನಪಟ್ಟಣ ತಾಲೂಕು ಸಂಚಾಲಕ ಶ್ರೀನಿವಾಸ್​ ಮುಖಂಡರುಗಳಾದ ವೆಂಕಟೇಶ್​, ಹರೀಶ್​, ಲೋಕೇಶ್​, ಹರೀಶ್​ ಬಾಲು, ಹನುಮಂತು ಸೇರಿದಂತೆ ಮುಂತಾದವರು ಇದ್ದರು.