ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರವಿಶಂಕರ್ (62) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುದೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಸಾಯಿಬಾಬಾ ನಗರದ ರವಿಶಂಕರ್ (62) ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಅ.21ರಂದು ಕುಣಿಗಲ್ ಸಮೀಪದ ಚಿಕ್ಕಣ್ಣ ಸ್ವಾಮಿ ದೇವಸ್ಥಾನಕ್ಕೆ ದ್ವಿಚಕ್ರ ವಾಹನದಲ್ಲಿ ಪತ್ನಿಯೊಂದಿಗೆ ತೆರಳುತ್ತಿದ್ದಾಗ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ&75ರಲ್ಲಿ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ರವಿಶಂಕರ್ ಹಾಗೂ ಪತ್ನಿ ತೀವ್ರ ಗಾಯಗೊಂಡಿದ್ದರು. ಪತ್ನಿಗೆ ಚಿಕಿತ್ಸೆ ಮುಂದುವರಿದಿದೆ. ಕುದೂರು ಠಾಣೆ ಪ್ರಕರಣ ದಾಖಲಾಗಿದೆ.