ಕನಕಪುರ: ಬಲಗೈ ಸಮುದಾಯಗಳ ಒಕ್ಕೂಟದಿಂದ ನ.28ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಸರ್ಕಾರಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಮುದಾಯದ ಮುಖಂಡ ಉಮೇಶ್ ತಿಳಿಸಿದರು.
ನಗರದ ಸರ್ಕಾರಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದು ೇತ್ರದ ಜನತೆಗೆ ಹೆಮ್ಮೆಯ ವಿಚಾರ. ಈ ನಿಟ್ಟಿನಲ್ಲಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಪೀಠಾಧ್ಯ ಶ್ರೀ ಾನಪ್ರಕಾಶ್ ಸ್ವಾಮೀಜಿ, ಬಮುಲ್ ಅಧ್ಯ ಡಿ.ಕೆ.ಸುರೇಶ್, ಅಪೆಕ್ಸ್ ಬ್ಯಾಂಕ್ ಅಧ್ಯ ಎಸ್.ರವಿ, ವಿಧಾನಪರಿಷತ್ ಸದಸ್ಯ ಎಚ್.ಪಿ. ಸುಧಾಮ್ ದಾಸ್, ಆರ್ಇಎಸ್ ವಿದ್ಯಾಸಂಸ್ಥೆಯ ಅಧ್ಯ ಎಚ್.ಕೆ.ಶ್ರೀಕಂಠ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್ಸಿ, ಎಸ್ಟಿ ಪಂಗಡಗಳ ಅಭಿವೃದ್ಧಿ ನಿಗಮದ ನಿರ್ದೇಶಕ ಶಿವರಾಜ್, ಹಟ್ಟಿ ಗೋಲ್ಡ್ ಮೈನ್ಸ್ನ ನಿರ್ದೆಶಕ ಕೆ.ಬಿ.ಚಿಕ್ಕಸ್ವಾಮಿ, ಎನ್.ಕೆ. ರಮೇಶ್, ಸೋಮಶೇಖರ್, ಕುಮಾರಸ್ವಾಮಿ, ಮಾಜಿ ನಗರಸಭಾ ಉಪಾಧ್ಯ ಗುಂಡಣ್ಣ, ಕರವಸೂಲಿಗಾರ ಮುನಿಚಿಕ್ಕಯ್ಯ ಇದ್ದರು.