ಮಹದೇಶ್ವರ ಬಡಾವಣೆಯಲ್ಲಿ ಗೃಹಿಣಿ ಅನುಶ್ರೀ ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಬೆಂಗಳೂರು ದಕ್ಷಿಣ

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಕನಕಪುರ: ಇಲ್ಲಿನ ಮಹದೇಶ್ವರ ಬಡಾವಣೆಯಲ್ಲಿ ಗೃಹಿಣಿ ಅನುಶ್ರೀ(35) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನುಶ್ರೀ ಹಾಗೂ ಪತಿ ಮಹೇಶ್​ ಮಧ್ಯೆ ಆಗಾಗ ಜಗಳವಾಗುತ್ತಿತ್ತು, ಮಂಗಳವಾರ ರಾತ್ರಿಯೂ ಜಗಳವಾಗಿದ್ದು, ಇದರಿಂದ ಮನನೊಂದ ಅನುಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದ್ದು, ಅನುಶ್ರೀಯ ತವರುಮನೆಯವರು ನೀಡಿದ ದೂರಿನ ಮೇರೇಗೆ ಸರ್ಕಲ್​ ಇನ್​ಸ್ಪೆಕ್ಟರ್​ ಅನಂತ್​ರಾಮ್​ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲಿಸಿ, ಮಹೇಶ್​ನನ್ನು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಮರಣೋತ್ತರ ಪರೀೆ ನಡೆಸಿ, ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.