ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ನಕಲಿ ವಂಶವೃ ಸೃಷ್ಟಿಸಿ ಭೂಮಾಫಿಯಾ?

ಕನಕಪುರ: ನಕಲಿ ದಾಖಲೆಗಳನ್ನು ಸೃಷ್ಟಿಸಿ 6 ಎಕರೆ 9 ಗುಂಟೆ ಜಮೀನು ಕಬಳಿಸಲು ಸಂಚು ರೂಪಿಸಿರುವ ಭೂಮಾಫಿಯಾ ವಿರುದ್ಧ ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್​ ಇಲಾಖೆ ಮೀನಮೇಷ ಎಣಿಸುತ್ತಿದೆ ಎಂದು ನಗರದ ಜೆ.ಸಿ.ಬಡಾವಣೆಯ ನಿವಾಸಿ, ದೂರುದಾರ ಎಂ.ಶಿವ ಆರೋಪಿಸಿದರು.
ನಗರದ ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ, ಮಾತನಾಡಿದ ಅವರು, ಕೋಡಿಹಳ್ಳಿ ಹೋಬಳಿಯ ಕೊಳಗೊಂಡನಹಳ್ಳಿಯ ಕುಟುಂಬವೊಂದರ ಸದಸ್ಯರು ಮತ್ತು ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಶಾಮೀಲಾಗಿ ಈ ಅಕ್ರಮ ಎಸಗಿದ್ದಾರೆ ಎಂದು ದೂರಿದರು.
ತಾಯಿಗೆ ಪಿತ್ರಾರ್ಜಿತವಾಗಿ ಬಂದ ಜಮೀನನ್ನು ಕಬಳಿಸಲು ನಕಲಿ ನೋಟರಿ, ಸುಳ್ಳು ವಂಶವೃ ಹಾಗೂ ನಕಲಿ ಆಧಾರ್​ ಕಾರ್ಡ್​ಗಳನ್ನು ಸೃಷ್ಟಿಸಲಾಗಿದೆ. ಸಂಬಂಧವೇ ಇಲ್ಲದ ವ್ಯಕ್ತಿಗಳನ್ನು ವಾರಸುದಾರರೆಂದು ತೋರಿಸಿ ಭೂಮಿ ಕಬಳಿಸಲು ಸಂಚು ರೂಪಿಸಲಾಗಿದೆ.
ಈ ಅಕ್ರಮದ ಕುರಿತು ಕಳೆದ ಡಿಸೆಂಬರ್​ನಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ದೂರು ನೀಡಲಾಗಿತ್ತು. ಸಚಿವರು ತನಿಖೆಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿಗಳು ಮರುತನಿಖೆ ನಡೆಸಲು ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ತಹಸೀಲ್ದಾರ್​ ಅವರು ನಕಲಿ ದಾಖಲೆ ಸೃಷ್ಟಿಸಿದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲು ಪತ್ರ ಬರೆದಿದ್ದರೂ, ಪೊಲೀಸರು ಮಾತ್ರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭೂಕಬಳಿಕೆ ಅಕ್ರಮದಲ್ಲಿ ಭಾಗಿಯಾಗಿರುವ ಉಪತಹಸೀಲ್ದಾರ್​, ಕಂದಾಯ ನಿರೀಕರು ಹಾಗೂ ಗ್ರಾಮ ಲೆಕ್ಕಿಗರನ್ನು ರಸುವ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ದಾಖಲಾಗಿದ್ದರೂ ಆರೋಪಿಗಳು ಮುಕ್ತವಾಗಿ ಓಡಾಡುತ್ತಿದ್ದಾರೆ. ಕೂಡಲೇ ಹಿರಿಯ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ನಮಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.