ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಕಾರು ಪಲ್ಟಿಯಾಗಿ ಒಬ್ಬ ಸಾವು, ಇಬ್ಬರಿಗೆ ಗಾಯ

ಚನ್ನಪಟ್ಟಣ: ತಾಲೂಕಿನ ಹರಿಸಂದ್ರ ಗೇಟ್​ ಬಳಿ ಗುರುವಾರ ರಾತ್ರಿ ಕಾರು ಪಲ್ಟಿಯಾಗಿ ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ತಾಲೂಕಿನ ಕೊಂಡಾಪುರ ಗ್ರಾಮದ ವಿಕಾಸ್​(22) ಮೃತ. ಟನೆಯಲ್ಲಿ ಕಾರಿನಲ್ಲಿದ್ದ ಆತನ ಸ್ನೇಹಿತರಾದ ಸಿದ್ಧಾರ್ಥ ಹಾಗೂ ನಂದೀಶ್​ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದಾರೆ. ಗುರುವಾರ ರಾತ್ರಿ ನಗರದಿಂದ ಗ್ರಾಮಕ್ಕೆ ತೆರಳುವ ವೇಳೆ, ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಲೆಗೆ ತೀವ್ರ ಗಾಯವಾದ ಕಾರಣ ವಿಕಾಸ್​ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.