ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕುರುಬಳ್ಳಿದೊಡ್ಡಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂವನ್ನು ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರಿಸಿರುವುದಕ್ಕೆ ಗ್ರಾಮಸ್ಥರು ಹಾಗೂ ಸಂದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಗ್ರಾಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನಸಂಖ್ಯೆಯಿದ್ದು, ಕಳೆದ ಹತ್ತು ವರ್ಷಗಳಿಂದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂ ಕಾರ್ಯನಿರ್ವಹಿಸುತ್ತಿದೆ. ಸಂಕ್ಕೆ ಸ್ವಂತ ಕಟ್ಟಡವಿಲ್ಲದ ಕಾರಣ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಸಮಸ್ಯೆ ಇಲ್ಲದಿದ್ದರೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಂಕರ ಅವರ ಒತ್ತಡದಿಂದ ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಂಗನವಾಡಿ ಕೇಂದ್ರದಲ್ಲಿ ಮಕ್ಕಳು ಇರುವಾಗಲೇ ಪಶು ಆಹಾರದ ಚೀಲಗಳನ್ನು ತಂದು ಸಂಗ್ರಹಿಸಲಾಗಿದೆ. ಈ ಕುರಿತು ಡಿವೈಎಸ್ಪಿ ಅವರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಡೇರಿಯನ್ನು ಅಂಗನವಾಡಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ಸಂದ ಅಧ್ಯರು ಹಾಗೂ ನಿರ್ದೇಶಕರು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರದ ಅವ್ಯವಸ್ಥೆಯನ್ನು ಸರಿಪಡಿಸಿ, ಎರಡೂ ಸಂಸ್ಥೆಗಳ ಕಾರ್ಯಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ನ.16ರಂದು ಕನಕಪುರ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿದ್ದು, ನ.18ರಂದು ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಕೋರಲಾಗಿದೆ. ಸಮಸ್ಯೆಗೆ ಸೂಕ್ತ ಪರಿಹಾರ ದೊರೆಯದಿದ್ದಲ್ಲಿ ನ.22ರಂದು ಶಾಂತಿಯುತ ಧರಣಿ ನಡೆಸಲಾಗುವುದು ಎಂದು ದೂರುದಾರರು ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ ಮೊರೆ: ಕನಕಪುರದಲ್ಲಿ ಹಿಟ್ಲರ್ ಮಾದರಿಯ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ. ಯಾವುದೇ ಅಧಿಕೃತ ಅನುಮತಿ ಪಡೆಯದೆ ಅಂಗನವಾಡಿ ಕೇಂದ್ರಕ್ಕೆ ಡೇರಿ ಸ್ಥಳಾಂತರಿಸಿ, ಅಲ್ಲಿನ ಮಕ್ಕಳನ್ನು ಬೀದಿಗೆ ಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಆರೋಪಿಸಿದ್ದಾರೆ. ಅಂಗನವಾಡಿ ಕೇಂದ್ರಗಳು ಸಿಡಿಪಿಒ ಅವರ ಸುಪರ್ದಿಯಲ್ಲಿದ್ದರೂ, ಈ ವಿಚಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಡೇರಿ ಸ್ಥಳಾಂತರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸ್ ಅಧೀಕರು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ಆದರೂ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರಕರಣವನ್ನು ಹೈಕೋರ್ಟ್ಗೆ ಕೊಂಡೊಯ್ಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪೋಟೊ
20 ಕೆಕೆಪಿ 2ಎ