ಕುದೂರು: ರಾಷ್ಟ್ರೀಯ ಹೆದ್ದಾರಿ&75ರ ಸೋಲೂರು ಮೂನ್ಲೈಟ್ ಡಾಬಾ ಬಳಿ ರಸ್ತೆ ದಾಟಲು ನಿಂತಿದ್ದಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೋಲೂರು ಹೋಬಳಿಯ ತಟ್ಟೇಕೆರೆಯ ಶಿವಕುಮಾರ್ (55) ಮೃತ. ಕಾರ್ಯನಿಮಿತ್ತ ಸೋಮವಾರ ಸ್ವಗ್ರಾಮದಿಂದ ಕೂಡ್ಲೂರಿಗೆ ಹೋಗಲು ಹೆದ್ದಾರಿ ರಸ್ತೆಯಲ್ಲಿ ನಿಂತಿದ್ದಾಗ ಕುಣಿಗಲ್ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅಪಘಾತದಿಂದ ದ್ವಿಚಕ್ರ ವಾಹನ ಸವಾರನೂ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.