ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಅಪಘಾತದಲ್ಲಿ ಪಾದಾಚಾರಿ ಸಾವು

ಬಿಡದಿ: ಬೆಂಗಳೂರು& ಮೈಸೂರು ಹೆದ್ದಾರಿಯ ಹೆಜ್ಜಾಲ್​ ಬಳಿ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೂಲತ@ ಉತ್ತರಪ್ರದೇಶದ ಹನ್ಸಾ ರಾಜ್​( 45) ಮೃತ. ಈತ ಸೆಂಟ್ರಿಂಗ್​ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಬಿಡದಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ತಲೆ ಹಾಗೂ ಇತರೆ ಭಾಗಗಳಿಗೆ ಗಂಭೀರಗಾಯವಾಗಿ ಮೃಪಟ್ಟಿದ್ದಾನೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ.