ಪಲ್ಸ್ ಪೊಲೊಯೋ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್.
- ಪಲ್ಸ್ ಪೊಲಿಯೋಗೆ ಸಿಬ್ಬಂದಿ ನಿಯೋಜನೆ
- ಆರೋಗ್ಯ ಇಲಾಕೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಜೂ.28 ರಿಂದ ಜುಲೈ 1ರವರೆಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದ್ದು, ಜಿಲ್ಲೆಯ 75,581 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಒಟ್ಟು 548 ಬೂತ್ ಮಟ್ಟದ ತಂಡಗಳನ್ನು ರಚಿಸಿಕೊಳ್ಳಲಾಗಿದೆ. ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿಯೇ ಈ ಬಾರಿಯೂ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು. ಈ ಮಹತ್ವಾಕಾಂ ಕಾರ್ಯಕ್ರಮದ ಯಶಸ್ವಿ ಮೇಲ್ವಿಚಾರಣೆಗಾಗಿ 110 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. 2,400 ಲಸಿಕಾದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಪ್ರತಿ ಮಗುವಿನ ಸುರತ ಭವಿಷ್ಯಕ್ಕಾಗಿ ಜಿಲ್ಲೆಯಲ್ಲಿ 0&5 ವರ್ಷದೊಳಗಿನ ಒಟ್ಟು 75,581 ಮಕ್ಕಳನ್ನು ಲಸಿಕೆ ಹಾಕಲು ಗುರುತಿಸಲಾಗಿದೆ. ಈ ಹಿಂದೆ ಮಕ್ಕಳಿಗೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಸಹ, ಜೂ.28 ರಿಂದ ಜುಲೈ 1 ರವರೆಗೆ ನಡೆಯುವ ಅಭಿಯಾನದಲ್ಲಿ ಪಾಲಕರು ಕಡ್ಡಾಯವಾಗಿ ಮತ್ತೊಮ್ಮೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಮಂಜುನಾಥ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜು, ಜಿಲ್ಲಾ ರೋಗವಾಹಕ ಆಶ್ರಿತ ರೋಗಳ ನಿಯಂತ್ರಣಾಧಿಕಾರಿ ಡಾ. ಪದ್ಮಾವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಿರಣ್ ಶಂಕರ್, ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.