ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಎಚ್.ಸಿ.ಬಾಲಕೃಷ್ಣ ಬೆಂಗಳೂರಿನಲ್ಲಿ ಭೇಟಿ ಮಾಡಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.
ಮಾಗಡಿ: ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಎಚ್.ಸಿ. ಬಾಲಕೃಷ್ಣ ಶುಕ್ರವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿದರು.
ಮಾಗಡಿ ವಿಧಾನಸಭಾ ೇತ್ರದ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಪ್ರಮುಖ ಕಾರ್ಯಗಳ ಬಗ್ಗೆ ಕುರಿತು ಸಚಿವರ ಗಮನಕ್ಕೆ ತಂದರು.
ಗ್ರಾಮೀಣ ರಸ್ತೆಗಳ ಡಾಂಬರೀಕರಣ, ಮುಖ್ಯರಸ್ತೆ ವಿಸ್ತರಣೆ, ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕ್ಕೆ ಮನವಿ ಸಲ್ಲಿಸಿದರು. ೇತ್ರದ ವಿವಿಧ ಪ್ರಗತಿ ಹಂತದಲ್ಲಿರುವ ಸಾರ್ವಜನಿಕ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಸರ್ಕಾರದಿಂದ ಶ್ರೀವಾಗಿ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಬಾಲಕೃಷ್ಣ ಮನವಿ ಆಲಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಮಾಗಡಿ ೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬಾಕಿ ಇರುವ ಯೋಜನೆಗಳ ಫೈಲ್ಗಳನ್ನು ಪರಿಶೀಲಿಸಿ, ಶ್ರೀದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು.
"
ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಅವರ ಅನುಭವ ಮತ್ತು ದೂರದೃಷ್ಟಿ ನಮ್ಮ ೇತ್ರದ ಹಲವು ಪ್ರಮುಖ ಯೋಜನೆಗಳಿಗೆ ಹೊಸ ವೇಗ ನೀಡಲಿದೆ ಎಂಬ ವಿಶ್ವಾಸ ನನಗಿದೆ.
— > ಎಚ್.ಸಿ.ಬಾಲಕೃಷ್ಣ ಶಾಸಕ, ಮಾಗಡಿ ೇತ್ರ