ಡಾ.ರಮ್ಯ 
ಬೆಂಗಳೂರು ದಕ್ಷಿಣ

ಹಿರಿಯ ಪಶುವೈದ್ಯಾಧಿಕಾರಿ ಡಾ. ರಮ್ಯಾ ನಿಧನ

ಮಾಗಡಿ: ಮಾದಿಗೊಂಡನಹಳ್ಳಿ ಪಶು ಚಿಕಿತ್ಸಾಲಯದ ಹಿರಿಯ ಪಶುವೈದ್ಯಾಧಿಕಾರಿ ಡಾ.ಎಚ್​.ಎಸ್​. ರಮ್ಯಾ(38) ಬುಧವಾರ ಸಂಜೆ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
11 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ರಮ್ಯಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಮ್ಯಾ ಮೂಲತ@ ಚಿಕ್ಕಮಗಳೂರು ಜಿಲ್ಲೆ ಬೀರೂರು ತಾಲೂಕಿನವರು. 9 ವರ್ಷಗಳಿಂದ ಮಾಗಡಿ ತಾಲೂಕಿನ ಮಾದಿಗೊಂಡನಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ಸಾರ್ವಜನಿಕರ ದರ್ಶನಕ್ಕಾಗಿ ಮಾದಿಗೊಂಡನಹಳ್ಳಿ ಪಶು ಚಿಕಿತ್ಸಾಲಯದ ಆವರಣದಲ್ಲಿ ಇರಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.