ಕನಕಪುರ: ನಗರದ ಮೈಸೂರು ರಸ್ತೆಯಲ್ಲಿರುವ ಖಾಸಗಿ ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮಂಗಳವಾರ ರಾತ್ರಿ ಚಿಕಿತ್ಸೆ ಲಿಸದೆ ಕೊನೆಯುಸಿರೆಳೆದಿದ್ದಾನೆ.
ತಾಲೂಕಿನ ಕೋಡಿಹಳ್ಳಿ ನಿವಾಸಿ, ಮೂಲತ@ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದಂಟಹಳ್ಳಿಯ ಶ್ರೀನಿವಾಸ್(18) ಮೃತಪಟ್ಟವ. ದ್ವೀತಿಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ ಮಂಗಳವಾರ ಎಂದಿನಂತೆ ಕಾಲೇಜಿಗೆ ಹೋಗಿದ್ದ. ಸಂಜೆ ತರಗತಿಗಳು ಮುಗಿದ ಬಳಿಕ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಪರಿಣಾಮ ಎರಡೂ ಕಾಲುಗಳು ಮುರಿದು, ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಹಾರೋಹಳ್ಳಿ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಲಿಸಿಲ್ಲ.
ಶ್ರೀನಿವಾಸನ ತಂದೆ ಮಹದೇವ ಪ್ರಭು ಅವರು ಕೋಡಿಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದು ವ್ಯಾಪಾರಕ್ಕಾಗಿ ದಂಟದಹಳ್ಳಿಯಿಂದ ಕೋಡಿಹಳ್ಳಿಗೆ ಬಂದು ನೆಲೆಸಿದ್ದರು. ಮೊಬೈಲ್ ಬಳಸಬೇಡ ಎಂದು ಬುದ್ಧಿ ಮಾತು ಹೇಳಿದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪಾಲಕರು ನಗರ ಠಾಣೆಗೆ ದೂರು ನೀಡಿದ್ದಾರೆ. ಸ್ವಗ್ರಾಮ ದಂಟಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ.