ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ನಿತ್ಯಶ್ರೀಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.
ಚನ್ನಪಟ್ಟಣ: ತಾಲೂಕಿನ ಮಳೂರುಪಟ್ಟಣದ ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿತ್ಯಶ್ರೀ
ಮೂರು ಚಿನ್ನದ ಪದಕ ಪಡೆಯುವ ಮೂಲಕ ಪಾಲಕರು ಹಾಗೂ ಹುಟ್ಟೂರಿಗೆ ಕೀರ್ತಿ ತಂದಿದ್ದಾರೆ.
ಗ್ರಾಮದ ವೀರಭದ್ರೇಗೌಡ&ಪ್ರತಿಭಾ ದಂಪತಿ ಪುತ್ರಿ ನಿತ್ಯಶ್ರೀ ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನ ಗಾಂಧಿ ಕೃಷಿ ವಿಾನ ಕೇಂದ್ರ (ಜಿಕೆವಿಕೆ), ಕೃಷಿ ವಿಶ್ವವಿದ್ಯಾಲಯದ ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ಪದವಿಯಲ್ಲಿ 10,000 ಅಂಕಗಳ ಶ್ರೇಣಿಯಲ್ಲಿ 8,933 ಸರಾಸರಿ ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಇತ್ತೀಚೆಗೆ ಹಮ್ಮಿಕೊಂಡಿದ್ದ ಕೃಷಿ ವಿಶ್ವವಿದ್ಯಾಲಯದ 60ನೇ ಟಿಕೋತ್ಸವದಲ್ಲಿ ಡಾ.ಎಸ್.ಜವರೇಗೌಡ ಚಿನ್ನದ ಪದಕ, ಸರ್ ಎಂ.ವಿಶ್ವೇಶ್ವರಯ್ಯ ಚಿನ್ನದ ಪದಕ, ಹಾಗೂ ಕೃಷಿ ವಿಶ್ವವಿದ್ಯಾಲಯದ ಚಿನ್ನದ ಪದಕವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಪ್ರದಾನ ಮಾಡಿದರು.