ಚನ್ನಪಟ್ಟಣ: ನಗರದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಿದ್ದ ಮೂವರು ಅಂತರಜಿಲ್ಲಾ ಸರಗಳ್ಳರನ್ನು ಪುರ ವೃತ್ತ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ರುಮಾನ್ ಪಾಷಾ, ಸೈಯದ್ ಅಭೀದ್ ಹಾಗೂ ಮೊಹಮ್ಮದ್ ಜುನೈದ್ ಪಾಷಾ ಬಂಧಿತರು.
ಮಾರ್ಚ್ 16ರಂದು ನಗರದ ಕಾಶಿ ವಿಶ್ವನಾಥ ದೇವಾಲಯದಿಂದ ಮನೆಗೆ ಮರಳುತ್ತಿದ್ದ ಸುನಂದಾ ಎಂಬ ಮಹಿಳೆಯ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತರು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ <4.5 ಲ ಮೌಲ್ಯದ 33.62 ಗ್ರಾಂ ತೂಕದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.