ಬೆಂಗಳೂರು&ಕನಕಪುರ ರಾಷ್ಟ್ರೀಯ ಹೆದ್ದಾರಿಯ ಅಗರ ಕ್ರಾಸ್​ ಬಳಿಯ ಅಪಘಾತದದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.  
ಬೆಂಗಳೂರು ದಕ್ಷಿಣ

ಅಪಘಾತದಲ್ಲಿ ಮೂವರು ಯುವಕರ ಸಾವು, ಇನ್ನೊಬ್ಬ ಗಂಭೀರ

ಹಾರೋಹಳ್ಳಿ: ಬೆಂಗಳೂರು&ಕನಕಪುರ ರಾಷ್ಟ್ರೀಯ ಹೆದ್ದಾರಿಯ ಅಗರ ಕ್ರಾಸ್​ ಬಳಿ ಲಾರಿ ಹಿಂಬದಿಗೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ಬೆಂಗಳೂರಿನ ತಿಲಕ ನಗರ ಸೈಯದ್​ ಪಾಷಾ (22), ಯೂನಿಫ್​ ಬಾನ್​ (23) ಅಜರ್​ ಪಾಷಾ(22) ಮತೃರು ಹಾಗೂ ಪರಾಜ್​ (23) ಗಾಯಾಳು.
ನಾಲ್ವರು ಭಾನುವಾರ ಬೆಳಗಿನ ಜಾವ ಬೆಂಗಳೂರಿನಿಂದ ಹಾರೋಹಳ್ಳಿಯ ಸಂಬಂಧಿಕರ ಮನೆಗೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಗರ ಕ್ರಾಸ್​ ಬಳಿಯ ರಸ್ತೆ ಉಬ್ಬು ಗಮನಿಸದೆ ಕಾರು ನುಗ್ಗಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಎಗರಿ ಮುಂದೆ ಚಲಿಸುತ್ತಿದ್ದ ಸಿಮೆಂಟ್​ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,ಅವಡದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟದ್ದು, ಮತ್ತೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಹಾಗೂ ಇನ್ನೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಗಂಭೀರ ಗಾಯಗೊಂಡ ರಾಜ್​ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಗ್ಗಲಿಪುರ ಠಾಣೆಯ ಇನ್​ಸ್ಪೆಕ್ಟರ್​ ನಂಜೇಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹಗಳನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.