ಯಲವನಾಥ್ ಎನ್.ಎ. ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿರುವುದು.
ಕನಕಪುರ: ತಾಲೂಕಿನ ಯಲವನಾಥ ಎನ್.ಎ. ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಮರ ಕಡಿದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಭಾರಿಗಾತ್ರದ ಮರವನ್ನು ಕಡಿದು ಟ್ರ್ಯಾಕ್ಟರ್ನಲ್ಲಿ ತುಂಬಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಅಂಥೊನಿ ಹಾಗೂ ಉಪವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಸ್ಥಳಕ್ಕೆ ಧಾವಿಸಿ ಮರ ತುಂಬಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದು, ಸುರೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಸ್ತುಪಾಲಕ ಗಂಗಾಧರ್ ಸಿಬ್ಬಂದಿ ಇದ್ದರು.