ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಟ್ಯ್ರಾಕ್ಟರ್​ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸಾವು

ಕುದೂರು: ಬೆಂಗಳೂರು&ಮಂಗಳೂರು ರಾಷ್ಟ್ರೀಯ ಹೆದ್ದಾರಿ&75ರ ಗುಡೇಮಾರನಹಳ್ಳಿ ಹ್ಯಾಂಡ್​ ಪೋಸ್ಟ್​ ಬಳಿ ಹೆದ್ದಾರಿಯಲ್ಲಿ ನಿಂತಿದ್ದ ಟ್ಯ್ರಾಕ್ಟರ್​ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಮಹಾಲಕ್ಷಿ$್ಮ ಲೇಔಟ್​ ನಿವಾಸಿಗಳಾದ ಚಂದನ್​ (22 ) ಮತ್ತು ಮಹೇಶ್​ (22) ಮೃತರು.
ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಚಂದನ್​ ಮತ್ತು ಮಹೇಶ್​ ಭಾನುವಾರ ರಾತ್ರಿ ಬೆಂಗಳೂರಿನಿಂದ ಕುಣಿಗಲ್​ ಮಾರ್ಗವಾಗಿ ಬೈಕ್​ ರೈಡ್​ ಹೋಗುತ್ತಿದ್ದಾಗ ನಿಂತಿದ್ದ ಟ್ಯ್ರಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್​ ಚಲಾಯಿಸುತ್ತಿದ್ದ ಚಂದನ್​ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೆ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ಮಹೇಶ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಿಸದೆ ಆತನೂ ಕೊನೆಯುಸಿರೆಳೆದಿದ್ದಾನೆ. ವಿದ್ಯಾರ್ಥಿಗಳ ಬಳಿ ಹೆಲ್ಮೆಟ್​ ಇದ್ದರೂ ತಲೆಗೆ ಧರಿಸಿಕೊಳ್ಳದೇ ಬೇಜಾವಾಬ್ದಾರಿಯಿಂದ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮರಣೋತ್ತರ ಪರೀೆಗಾಗಿ ಮೃತದೇಹಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.