ಬಿಡದಿ: ಹಾರೋಹಳ್ಳಿ ಮುಖ್ಯರಸ್ತೆಯ ಅಬ್ಬನಕುಪ್ಪೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಾರೋಹಳ್ಳಿ ತಾಲೂಕಿನ ಮರಸನಹಳ್ಳಿ ಶಿವರಾಜ್ (48) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿವರಾಜ್ ಅವರು ಬೈರಮಂಗಲ ವಿಎಸ್ಸೆಸ್ಸೆನ್ನಲ್ಲಿ ಕಾರ್ಯದರ್ಶಿಯಾಗಿದ್ದರು. ಬೈರಮಂಗಲದಿಂದ ಕೈಗಾರಿಕಾ ಪ್ರದೇಶದತ್ತ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ನಿಂದ ರಸ್ತೆಗೆ ಬಿದ್ದ ಶಿವರಾಜು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀೆಗೆ ರಾಮನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.