ಚನ್ನಪಟ್ಟಣ: ತಾಲೂಕಿನ ಸಂತೇಮೊಗೇನಹಳ್ಳಿಯಲ್ಲಿ ಮಂಗಳವಾರ ಮುಂಜಾನೆ ಜಮೀನಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿಮಾಡಿ ಗಾಯಗೊಳಿಸಿದೆ.
ನಾರಾಯಣಗೌಡ(70) ಗಾಯಗೊಂಡವರು. ಬೆಳಗ್ಗೆ 5.30ರ ಸುಮಾರಿನಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಕೆರೆ ರಸ್ತೆಯಲ್ಲಿ ಹೋಗುವ ವೇಳೆ ಎದುರಿಗೆ ಸಿಕ್ಕ ಕಾಡಾನೆ ದಾಳಿಮಾಡಿದೆ. ಕಾಡಾನೆ ದಾಳಿಗೆ ಸಿಲುಕಿದ ಇವರಿಗೆ ಬಲಗಾಲಿನ ಮೂಳೆ ಮುರಿದಿದ್ದು, ಸೊಂಟಕ್ಕೆ ಪೆಟ್ಟಾಗಿದೆ. ದಾಳಿಯ ವೇಳೆ ಈತ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿಯಿಂದ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ ಇವರನ್ನು ಹಲವು ಗಂಟೆಗಳ ಕಾಲ ಯಾರು ನೋಡಿರಲಿಲ್ಲ. ನಂತರ ಇವರನ್ನು ಕಂಡ ಸಾರ್ವಕನಿಕೊಬ್ಬರು ವಿಚಾರವನ್ನು ಗ್ರಾಮಸ್ಥರಿಗೆ ಮುಟ್ಟಿಸಿದ್ದಾರೆ. ಕೂಡಲೇ ಗ್ರಾಮಸ್ಥರು ಪೊಲೀಸರು ಹಾಗೂ ಅರಣ್ಯಾ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಇವರನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಉಪ ಅರಣ್ಯ ಸಂರಣಾಧಿಕಾರಿ ಎಂ. ರಾಮಕೃಷ್ಣಪ್ಪ, ಎಸಿಎ್ ಪುಟ್ಟಮ್ಮ, ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಇನ್ನೂ ಗಾಯಾಳುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಅರಣ್ಯ ಇಲಾಖೆ ಬರಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚನ್ನಪಟ್ಟಣ ವಲಯ ಅರಣ್ಯ ಅಧಿಕಾರಿ ಮಲ್ಲೆಶ್ ಮತ್ತು ಅಧಿಕಾರಿಗಳು ಇದ್ದರು.